ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ತೃತೀಯ ಭಾಷೆಯ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ತೃತೀಯ ಭಾಷೆಯ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಗ್ರೇಡ್ ಗಳನ್ನು ನೀಡುವ ಬದಲು, ಕಡ್ಡಾಯವಾಗಿ ಅಂಕಗಳನ್ನೇ (Marks) ನೀಡಬೇಕು ಎಂದು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ರಾಜ್ಯ ಸರ್ಕಾರವು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಕೇವಲ ಗ್ರೇಡ್‌ಗಳನ್ನು ನೀಡುವ ನಿರ್ಧಾರವನ್ನು ಮಾಡಿತ್ತು. ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜಿ. ನರೇಂದರ್ ಮತ್ತು ವಿಜಯಕುಮಾರ್ ಎ. ಪಾಟೀಲ್ ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ನಿರ್ದೇಶನ ನೀಡಿದೆ.
ಪ್ರಥಮ ಮತ್ತು ದ್ವಿತೀಯ ಭಾಷೆಗಳಿಗೆ ಅಂಕಗಳನ್ನು ನೀಡಿ, ಕೇವಲ ತೃತೀಯ ಭಾಷೆಗೆ ಗ್ರೇಡ್ ನೀಡುವುದು ಸರಿಯಲ್ಲ. ಇದು ವಿದ್ಯಾರ್ಥಿಗಳ ನಡುವೆ ತಾರತಮ್ಯಕ್ಕೆ ಕಾರಣವಾಗಬಹುದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಉನ್ನತ ಶಿಕ್ಷಣದ ಪ್ರವೇಶಾತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಟ್ಟು ಅಂಕಗಳು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ತೃತೀಯ ಭಾಷೆಯಲ್ಲೂ ಅಂಕಗಳನ್ನು ನಮೂದಿಸುವುದು ಅತ್ಯಗತ್ಯ. ಈ ಹಿಂದಿನಂತೆ ತೃತೀಯ ಭಾಷೆಗೂ ಅಂಕಗಳನ್ನೇ ನೀಡುವ ವ್ಯವಸ್ಥೆಯನ್ನು ಮುಂದುವರಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


