nammatumakuru

    Subscribe to Updates

    Get the latest creative news from FooBar about art, design and business.

    What's Hot

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026
    Facebook Twitter Instagram
    ಟ್ರೆಂಡಿಂಗ್
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    ರಾಜ್ಯ ಸುದ್ದಿ June 10, 2026

    ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ

    By adminJune 10, 2026No Comments2 Mins Read

    ಬೆಂಗಳೂರು: ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಯುವಕರಿಗೆ ಉತ್ತೇಜನ ನೀಡಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.

    ವಿಧಾನ ಸೌಧದಲ್ಲಿ ಮಂಗಳವಾರ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.

    ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರಿಗೆ ಸೂಕ್ತ ತರಬೇತಿ, ಆರ್ಥಿಕ ನೆರವು ಮತ್ತು ಸ್ಪರ್ಧಾತ್ಮಕ ಅವಕಾಶಗಳನ್ನು ಒದಗಿಸಿದರೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಅಲ್ಲದೆ, ರಾಜ್ಯದ ಸಾಂಪ್ರದಾಯಿಕ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದರು.

    ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರದಿಂದ ನೀಡಲಾಗುವ ವಿವಿಧ ಪ್ರಶಸ್ತಿಗಳ ಕುರಿತು ಸಭೆಯಲ್ಲಿ ಚರ್ಚಿಸಿದರು. ಸಾಧಕರಿಗೆ ನೀಡಬೇಕಿರುವ ಕ್ರೀಡಾ ಪ್ರಶಸ್ತಿಗಳನ್ನು ಯಾವುದೇ ಕಾರಣಕ್ಕೂ ಬಾಕಿ ಉಳಿಸಬಾರದು. ಅರ್ಹ ಕ್ರೀಡಾಪಟುಗಳನ್ನು ಪಾರದರ್ಶಕವಾಗಿ ಗುರುತಿಸಿ, ಪ್ರಶಸ್ತಿಗಳನ್ನು ನೀಡುವ ಮೂಲಕ ಅವರ ಸಾಧನೆಯನ್ನು ಗೌರವಿಸುವ ಕೆಲಸವಾಗಬೇಕು. ಇದು ಇತರ ಯುವ ಕ್ರೀಡಾಪಟುಗಳಿಗೂ ಪ್ರೇರಣೆಯಾಗಲಿದೆ ಎಂದು ಅವರು ಹೇಳಿದರು.

    ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್ ಸೇರಿದಂತೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ರಾಜ್ಯಕ್ಕೆ ಕೀರ್ತಿ ತಂದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿನ ಹುದ್ದೆಗಳಿಗೆ ನೇಮಕ ಮಾಡುವ ಮೂಲಕ, ಕ್ರೀಡಾಪಟುಗಳಿಗೆ ಉತ್ತೇಜನ ಸರ್ಕಾರದ ಜವಾಬ್ದಾರಿ ಎಂದು ತಿಳಿಸಿದರು.

    ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಕುಮಾರ್, ಸರ್ಕಾರಿ ವೈಮಾನಿಕ ತರಬೇತಿ ಶಾಲೆಯ ನಿರ್ದೇಶಕ ಬಸವರಾಜೇಂದ್ರ ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಕಂದಾಯ, ಕ್ರೀಡೆ ಜೊತೆಗೆ ಮುಜರಾಯಿ ಖಾತೆ..!

    ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಕಂದಾಯ, ಕ್ರೀಡೆ, ಯುವಜನ ಖಾತೆ ಜೊತೆಗೆ ಮುಜರಾಯಿ ಖಾತೆಯನ್ನು ಹಂಚಿಕೆ ಮಾಡಲಾಗಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಮುಜರಾಯಿ ಇಲಾಖೆಯ ಖಾತೆ ಪರಿಶೀಲನೆ ಬಳಿಕ ಬಹಿರಂಗಗೊಂಡಿದೆ. ಖಾತೆ ಹಂಚಿಕೆ ಆದೇಶದಲ್ಲಿ ಡಿಸಿಎಂ ಅವರಿಗೆ ಕಂದಾಯ, ಕ್ರೀಡೆ, ಯುವಜನ ಖಾತೆ ನೀಡಿರುವುದಾಗಿ ಪ್ರಚಾರವಾಗಿದ್ದು, ಆದರೆ ಕಂದಾಯ ಇಲಾಖೆಯಲ್ಲಿ ಮುಜರಾಯಿ ಖಾತೆಯನ್ನು ಸೇರ್ಪಡೆಗೊಳಿಸಿದ್ದು, 3 ಇಲಾಖೆಗಳ ಜವಾಬ್ದಾರಿ ಡಿಸಿಎಂ ಅವರಿಗೆ ದೊರೆತಿದೆ.

    ದೇವಸ್ಥಾನಗಳಲ್ಲಿ ಭಕ್ತರಿಗೆ ಸೌಕರ್ಯ ಹೆಚ್ಚಿಸಿ:

    ಮುಜರಾಯಿ ಇಲಾಖೆಯ ಆಡಳಿತಾತ್ಮಕ ವಿಚಾರಗಳ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದ ಸಚಿವ ಪರಮೇಶ್ವರ್ ಅವರು ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ನಿರ್ವಹಣೆ, ಭಕ್ತರಿಗೆ ಒದಗಿಸಲಾಗುತ್ತಿರುವ ಸೌಕರ್ಯಗಳು ಹಾಗೂ ಇಲಾಖೆಯ ಕಾರ್ಯಕ್ಷಮತೆಯನ್ನು ಮತ್ತಷ್ಟು ಸುಧಾರಿಸಬೇಕು. ಖಾಲಿ ಇರುವ 235 ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪ್ರಾರಂಭಿಸಬೇಕು. ಈ ನಿಟ್ಟಿನಲ್ಲಿ ಇಲಾಖೆಯ ಎಲ್ಲಾ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ನಿಗದಿತ ಸಮಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2…

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.