ಬೆಂಗಳೂರಿನಲ್ಲಿ ಫೆಬ್ರವರಿ 11 ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಸಿದ್ಧತೆಗಳ ಅಂಗವಾಗಿ ರಾಜ್ಯ ಸರ್ಕಾರವು ದೆಹಲಿಯಲ್ಲಿ ರೋಡ್ ಶೋ ನಡೆಸಿತು.
ರಾಜ್ಯದಲ್ಲಿ ಹೂಡಿಕೆಯ ಅವಕಾಶಗಳ ಬಗ್ಗೆ ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರು ಉದ್ಯಮಿಗಳಿಗೆ ಮನವರಿಕೆ ಮಾಡಿಕೊಟ್ಟು ಸಮಾವೇಶದಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದಾರೆ.
ಬಳಿಕ ಮಾತನಾಡಿದ ಸಚಿವರು, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ₹10 ಲಕ್ಷ ಕೋಟಿ ಹೂಡಿಕೆ ಆಗುವ ವಿಶ್ವಾಸ ಇದೆ. ರಾಜ್ಯದ ಆಹಾರ ಸಂಸ್ಕರಣಾ ವಲಯಕ್ಕೆ ಕೊಡುಗೆ ನೀಡುತ್ತಿರುವ ಐಟಿಸಿ ಲಿಮಿಟೆಡ್, ಈ ಕ್ಷೇತ್ರಗಳಲ್ಲಿ ತನ್ನ ವಹಿವಾಟು ವಿಸ್ತರಿಸುವುದಾಗಿ ವಾಗ್ದಾನ ಮಾಡಿದೆ. ಐಟಿಸಿ ಲಿಮಿಟೆಡ್‌ನ ಈ ಹೂಡಿಕೆ ಪ್ರಸ್ತಾವಗಳು ರಾಜ್ಯದಲ್ಲಿ ಮೂಲಸೌಲಭ್ಯಗಳಿಗೆ ಉತ್ತೇಜನ ನೀಡಲಿವೆ. ಉದ್ಯೋಗ ಅವಕಾಶಗಳು ಹೆಚ್ಚಿಸಲಿವೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4