ತುಮಕೂರು: ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾಗಿ ಈಗಾಗಲೇ ತೆರೆಮರೆಯಲ್ಲಿ ಬಹುತೇಕ ಮಾಜಿ ಸಚಿವ ವಿ. ಸೋಮಣ್ಣ ಅವರಿಗೆ ಅಂತಿಮ ಪ್ರಕ್ರಿಯೆ ನಡೆದಿದೆ.
ಈ ವಿಷಯ ತುಮಕೂರು ಜಿಲ್ಲೆಯ ಬಿಜೆಪಿ ವಲಯದಲ್ಲಿ ಒಂದು ರೀತಿ ಮಿಂಚಿನ ಸಂಚಾರ ಉಂಟು ಮಾಡಿದ್ದು ಅಲ್ಲಲ್ಲಿ ಗೋ ಬ್ಯಾಕ್ ಸೋಮಣ್ಣ ಎಂಬ ಘೋಷಣೆಗಳೊಂದಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನಲ್ಲಿ ಕೆಲ ಬಿಜೆಪಿ ಕಾರ್ಯಕರ್ತರು ಒಂದೆಡೆ ಸೇರಿ ಗೋ ಬ್ಯಾಕ್ ಸೋಮಣ್ಣ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮೂಲಕ ಸೋಮಣ್ಣ ಅವರಿಗೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಬಾರದು ಎಂದು ಪರೋಕ್ಷವಾಗಿ ಒತ್ತಾಯಿಸಿದ್ದಾರೆ.
ಇನ್ನೊಂದೆಡೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿಯೂ ಕೂಡ ಬಿಜೆಪಿ ಕಾರ್ಯಕರ್ತರು ಗೋ ಬ್ಯಾಕ್ ಸೋಮಣ್ಣ ಎಂದು ಘೋಷಣೆ ಕೂಗುವ ಮೂಲಕ ಬೃಹತ್ ಪ್ರತಿಭಟನೆ ಒಂದನ್ನು ಮಾಡಿದ್ದಾರೆ.
ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಆಕ್ರೋಶ ವ್ಯಕ್ತಪಡಿಸಿರುವುದು ಗಮನಾರ್ಹ ಅಂಶವಾಗಿದೆ.
ಮಾಧುಸ್ವಾಮಿ ಬೆಂಬಲಿಗರು ರಸ್ತೆ ತಡೆ ನಡೆಸಿ ಟೈರ್ ಗೆ ಬೆಂಕಿ ಹಚ್ಚಿ ಸೋಮಣ್ಣ ತೊಲಗಿಸಿ ಎಂದು ಘೋಷಣೆ ಕೂಗಿದ್ದಾರೆ.
ಅಲ್ಲದೆ ಮಾಜಿ ಸಚಿವ ಮಾಧುಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಸ್ಥಳೀಯ ನಾಯಕರಿಗೆ ಟಿಕೆಟ್ ನೀಡಿದರೆ ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಲಿದ್ದಾರೆ ಆದರೆ ವಿ ಸೋಮಣ್ಣ ಅವರು ಹೊರ ಜಿಲ್ಲೆಯಿಂದ ಬಂದು ಇಲ್ಲಿ ಚುನಾವಣೆಗೆ ಸ್ಪರ್ಧಿಸುವುದು ಬೇಡ ವಾಪಸ್ ಹೋಗಬೇಕೆಂದು ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
ತುಮಕೂರು ಶಿವಮೊಗ್ಗ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು ನಡೆ ತುಮಕೂರು ನಗರದಲ್ಲಿ ಮಾಜಿ ಸಚಿವ ಸಗಡ ಶಿವಣ್ಣ ಅವರಿಗೆ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಸಭೆ ಸೇರಿ ಹಕ್ಕೊತ್ತಾಯವನ್ನು ಮಂಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


