ಪಣಜಿ: ಗೋವಾದಲ್ಲಿ ಕಾಂಗ್ರೆಸ್ ಪಕ್ಷವು ಪಕ್ಷಾಂತರದ ಯತ್ನವನ್ನು ತಡೆದ ಎರಡು ತಿಂಗಳ ನಂತರ, 11 ಶಾಸಕರಲ್ಲಿ ಎಂಟು ಮಂದಿ ಶಾಸಕರು ಬಿಜೆಪಿ ಸೇರಿದ್ದಾರೆ.
ಹಿರಿಯ ನಾಯಕರಾದ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ನೇತೃತ್ವದಲ್ಲಿ ಈ ಶಾಸಕರು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಭಾರತ್ ಜೋಡೋ ಯಾತ್ರೆಯ ನಡುವೆಯೇ ಗೋವಾದಲ್ಲಿನ ಸಾಮೂಹಿಕ ಪಕ್ಷಾಂತರವು ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುಜುಗರವನ್ನುಂಟುಮಾಡಿದೆ.
ಸಿಎಂ ಪ್ರಮೋದ್ ಸಾವಂತ್ ಸಮ್ಮುಖದಲ್ಲಿ ದಿಗಂಬರ ಕಾಮತ್, ಮೈಕಲ್ ಲೋಬೋ, ದೇಲಿಲಾ ಲೋಬೋ, ಸೇರಿದಂತೆ 8 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ ಈಗ ಕೇವಲ 3 ಶಾಸಕರನ್ನು ಹೊಂದಿದ್ದು, ಬಿಜೆಪಿ ಸಂಖ್ಯೆ 28 ಕ್ಕೆ ಏರಿದೆ.
ಕಾಂಗ್ರೆಸ್ ನ ಎಲ್ಲಾ ಶಾಸಕರು ಪ್ರಧಾನಿ ಮೋದಿ ಅವರ ಕೈಗಳನ್ನು ಬಲಪಡಿಸಲು ಪ್ರಯತ್ನಿಸುತ್ತಾರೆ ಎಂದು ಲೋಬೋ ಬಿಜೆಪಿಗೆ ಸೇರುವ ಸಂದರ್ಭದಲ್ಲಿ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy