nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾತುರ್ವಣ  ವ್ಯವಸ್ಥೆಯನ್ನು  ದೇವರು ಮಾಡಿಲ್ಲ: ಮುಖ್ಯಮಂತ್ರಿ  ಸಿದ್ದರಾಮಯ್ಯ
    ರಾಜ್ಯ ಸುದ್ದಿ January 14, 2024

    ಚಾತುರ್ವಣ  ವ್ಯವಸ್ಥೆಯನ್ನು  ದೇವರು ಮಾಡಿಲ್ಲ: ಮುಖ್ಯಮಂತ್ರಿ  ಸಿದ್ದರಾಮಯ್ಯ

    By adminJanuary 14, 2024No Comments2 Mins Read
    siddaramaiah

    ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು. ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

    ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ವೈಭವ  2024 ಸಮಾವೇಶದಲ್ಲಿ  ಮಾತನಾಡಿದರು.


    Provided by
    Provided by

    ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಸಮಾಜದಲ್ಲಿ ಅವಕಾಶ ದೊರೆತವರು ಮುಂದುವರೆದರು ಮೇಲ್ಜಾತಿಯವರಾದರು. ಅವಕಾಶ ವಂಚಿತರು ಹಿಂದುಳಿದು ಕೆಳಜಾತಿಯವರಾದರು. ಚಾತುರ್ವಣ  ವ್ಯವಸ್ಥೆಯನ್ನು  ದೇವರು ಮಾಡಲಿಲ್ಲ. ಮನುಷ್ಯನ ಸ್ವಾರ್ಥದಿಂದಾಗಿ ನಾವು ಮಾಡಿಕೊಂಡಿದ್ದೇವೆ. ಮಹಿಳೆಯರೂ ಅವಕಾಶ ವಂಚಿತರಾಗಿದ್ದರು. ಅಂಬೇಡ್ಕರ್ ಅವರು ಎಲ್ಲರಿಗೂ ಶಿಕ್ಷಣ ಕಡ್ಡಾಯ ಎಂದು ಸಂವಿಧಾನದಲ್ಲಿ ಹೇಳಿದ್ದಾರೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದವರು ಶೂದ್ರರಾದರು.  ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಇದರ ಲಾಭ ಪಡೆದವರು ಈಗಲೂ ಆ ಪ್ರಯತ್ನ ವನ್ನು ಮಾಡುತ್ತಿದ್ದಾರೆ. ಶೋಷಣೆಗೆ ಒಳಪಟ್ಟವರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು . ಕುರುಬರೂ ಇದರಲ್ಲಿ ಸೇರಿದ್ದಾರೆ ಎಂದರು.

    ಮೇಲು, ಕೀಳೆಂದು ಜಾತಿಬೇಧ ಮಾಡುವುದು ನಿರರ್ಥಕ ಎಂದು ಬಸವಾದಿ ಶರಣರು, ಕನಕದಾಸರು ತಿಳಿಸಿದ್ದರು. ಕಾಯಕ ಮತ್ತು ದಾಸೋಹದಂತಹ ಮೌಲ್ಯಗಳನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೇವಲ ರಾಜಕೀಯ ಪ್ರಜಾಪ್ರಭುತ್ವ ಅಲ್ಲದೇ ಆರ್ಥಿಕ ಹಾಗೂ ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪಿತವಾಗಬೇಕು ಎಂದು ಡಾ. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಹಿಂದುಳಿದವರು ಕೈಗಾರಿಕೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಹೊಂದಿ ಮುಖ್ಯ ವಾಹಿನಿಗೆ ಬರಬೇಕು. ಶಿಕ್ಷಣ ಪಡೆದಾಗ ಮಾತ್ರ  ದೌರ್ಜನ್ಯಗಳನ್ನು ಎದುರಿಸಿ ಸ್ವಾವಲಂಬಿಗಳಾಗಲು ಸಾಧ್ಯ ಎಂದರು.

    ಜನರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬಲು ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಶಕ್ತಿ ಯೋಜನೆಯಡಿ 130.28 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. 1.17 ಕೋಟಿ ಕುಟುಂಬದ ಯಜಮಾನಿಗೆ ತಲಾ 2000 ರೂ.  ಗೃಹಲಕ್ಷ್ಮಿ ಯೋಜನೆ, 200 ಯೂನಿಟ್ ಉಚಿತ ವಿದ್ಯುತ್ , 5 ಕೆಜಿ ಅಕ್ಕಿ  ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಬೆಲೆ ಏರಿಕೆಯ ಕಾಲಮಾನದಲ್ಲಿ ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಬೇಕು. ಆದ್ದರಿಂದ ಸಾರ್ವತ್ರಿಕ ಮೂಲ ಆದಾಯ ತತ್ವವನ್ನಾಧರಿಸಿ ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ. ಇಂತಹ ಜನಪರ ಯೋಜನೆಗಳಿಗೆ ಟೀಕೆಗಳು ಬಂದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಶೋಷಿತರು, ಬಡವರು, ದೀನದಲಿತರು, ಅಲ್ಪಸಂಖ್ಯಾತರು, ದುರ್ಬಲವರ್ಗದವರ ಪರ ನಾನು ಸದಾ ನಿಂತಿರುತ್ತೇನೆ ಎಂದರು.

    ಇತಿಹಾಸ ತಿಳಿಯದವರು ಭವಿಷ್ಯ ವನ್ನು ರೂಪಿಸಲು ಸಾಧ್ಯವಿಲ್ಲ. ಇತಿಹಾಸ ತಿಳಿದವರು ಮಾತ್ರ ಅವರ  ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದರು.  ಹಿಂದೆ ಏನಾಗಿದ್ದೆವು, ಮುಂದೇನಾಗಬೇಕು ಎಂದು ಚರ್ಚೆಗಳಾಗಲು ಇಂಥ ಸಮಾವೇಶಗಳು ಅಗತ್ಯ. ಜಾತಿ ಮಾಡಿದವರೇ ಜಾತಿ ಸಮಾವೇಶ ಮಾಡಬಾರದು ಎನ್ನುತ್ತಾರೆ. ಅಂಥವರ ಬಗ್ಗೆ ಎಚ್ಚರಿಕೆ ಅಗತ್ಯ. ರಾಜಕೀಯ ಚಿಂತಕ ಲೋಹಿಯಾ  ಅವರು ‘ಮುಂದುವರೆದ ಜಾತಿ , ಜಾತಿ ಸಮಾವೇಶ ಮಾಡಿದರೆ ಅದು ಜಾತಿ ಸಮಾವೇಶವಾಗುತ್ತದೆ. ಹಿಂದುಳಿದವರು, ಶೋಷಣೆಗೆ ಒಳಪಟ್ಟವರು ಸಂಘಟನೆಗಾಗಿ ಸಮಾವೇಶ ಮಾಡಿದರೆ ಅದು ಜಾತಿ ಸಮಾವೇಶ ಅಲ್ಲ’ ಎಂದಿದ್ದಾರೆ ಎಂದರು.

    admin
    • Website

    Related Posts

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.