ಪ್ರೇಯಸಿಯ ತಲೆಯನ್ನು ಗೋಡೆಗೆ ಗುದ್ದಿ ಪ್ರಿಯಕರ ಹತ್ಯೆ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ನಡೆದಿದೆ.
ನೇಪಾಳ ಮೂಲದ ಕೃಷ್ಣಕುಮಾರಿ (23) ಹತ್ಯೆಗೀಡಾದ ಯುವತಿ. ಸಂತೋಷ್ ದಾಮಿ (27) ಕೊಲೆ ಮಾಡಿ ಸಿಕ್ಕಿಬಿದ್ದಿದ್ದಾನೆ.
ಕೃಷ್ಣಕುಮಾರಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದರೆ, ಸಂತೋಷ್ ಸಲೂನ್ ನಲ್ಲಿ ಕೆಲಸ ಮಾಡುತ್ತಿದ್ದ. ಪರಸ್ಪರ ಪರಿಚಯ ಆದ ನಂತರ ನೇಪಾಳ ಮೂಲದ ಇಬ್ಬರು ಲಿವ್ ಇನ್ ರಿಲೇಷನ್ ಶಿಪ್ ನಲ್ಲಿ ವಾಸವಾಗಿದ್ದರು.
ಬುಧವಾರ ಇಬ್ಬರ ನಡುವೆ ಜಗಳ ಉಂಟಾಗಿದ್ದು, ಸಿಟ್ಟಿನ ಭರದಲ್ಲಿ ಸಂತೋಷ್ ಪ್ರೇಯಸಿಯನ್ನು ಗೋಡೆಗೆ ಗುದ್ದಿ ಕೊಲೆ ಮಾಡಿದ್ದಾನೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


