ಬೆಂಗಳೂರು: ಶಿಥಿಲಾವಸ್ಥೆಯಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೀಪಾಂಜಲಿನಗರದ ಜಂಕ್ಷನ್ ಬಳಿ ನಡೆದಿದೆ.
ಶಿಥಿಲಾವಸ್ಥೆಯಲ್ಲಿದ್ದ ತಡೆಗೋಡೆ ಇದಾಗಿದ್ದು, ಭಾರಿ ಮಳೆಯಿಂದಾಗಿ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೃತರನ್ನು ರಾಜಾಮಣಿ ಹಾಗೂ ಬಾಲು ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz