ಜೋಧ್ಪುರ: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಂಗಳವಾರ ಮಾರ್ಚ್ 31ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
2013ರ ಅತ್ಯಾಚಾರ ಪ್ರಕರಣದಲ್ಲಿ ಅಸಾರಾಂ ಬಾಪು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಮತ್ತು ಚಿಕಿತ್ಸೆಯ ಅಗತ್ಯವನ್ನು ಗಮನಿಸಿದ ಸುಪ್ರೀಂ ಕೋರ್ಟ್ ಮತ್ತೊಂದು ಅತ್ಯಾಚಾರ ಪ್ರಕರಣದಲ್ಲಿ ಮಾರ್ಚ್ 31ರವರೆಗೆ ಅಸಾರಾಂ ಅವರಿಗೆ ಜನವರಿ 7ರಂದು ಮಧ್ಯಂತರ ಜಾಮೀನು ನೀಡಿತ್ತು. ಅದಾದ ವಾರದ ನಂತರ ಮತ್ತೊಮ್ಮೆ ಮಧ್ಯಂತರ ಜಾಮೀನು ಸಿಕ್ಕಿದೆ.
ವೈದ್ಯಕೀಯ ಕಾರಣಗಳಿಗಾಗಿ ಸರ್ವೋಚ್ಚ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದ ಕೂಡಲೇ, ಅಸಾರಾಂ ಪರ ವಕೀಲರು ಹೈಕೋರ್ಟ್ನಲ್ಲಿ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಮನವಿ ಮಾಡಿದರು.
ಅರ್ಜಿಯ ಸ್ವರೂಪವು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದಂತೆಯೇ ಇದೆ ಎಂದು ಪರಿಗಣಿಸಿದ ನ್ಯಾಯಮೂರ್ತಿಗಳಾದ ದಿನೇಶ್ ಮೆಹ್ತಾ ಮತ್ತು ವಿನೀತ್ ಕುಮಾರ್ ಮಾಥುರ್ ಅವರಿದ್ದ ವಿಭಾಗೀಯ ಪೀಠವು, ಆಸಾರಾಂಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx