ಬೆಳಗಾವಿ: ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು, 25 ತೊಲೆ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ.
ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿದ್ದ 25 ತೊಲೆ ಬಂಗಾರ, 20 ತೊಲೆ ಬೆಳ್ಳಿ ಹಾಗೂ 4 ಸಾವಿರ ರೂ. ನಗದನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಗೋಕಾಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy