ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಾವರ್ಕರ್ ವಾರ್ ಶುರುವಾಗಿದೆ. ಇದರ ನಡುವೆ ಈಗ ಮತ್ತೊಂದು ಹೊಸ ಗಲಾಟೆ ಶುರುವಾಗಿದೆ.
ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ. ತಡರಾತ್ರಿ ಕೆಲ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಭಾವಚಿತ್ರ ಹರಿದು ದರ್ಪ ಮೆರೆದಿದ್ದಾರೆ.
ಕಿಡಿಗೇಡಿಗಳ ಕೃತ್ಯವನ್ನ ಖಂಡಿಸಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಟೈರ್ಗೆ ಬೆಂಕಿ ಹಚ್ಚಿ ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ.
ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ಹೆಸರಿಡಿ ಎಂದು ಫೋಟೋ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗೋಕಾಕ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy