ತುಮಕೂರು: ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕಾ ವಲಯಗಳ ವಿವಿಧ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತುಮಕೂರಿನ ಗೊಲನ ಎಂಟರ್ ಪ್ರೈಸಸ್ ಅರ್ಹ ಯುವಕ ಹಾಗೂ ಯುವತಿಯರಿಂದ ತಕ್ಷಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಕರ್ಷಕ ವೇತನದೊಂದಿಗೆ ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸ ಮಾಡಲು ಸುವರ್ಣಾವಕಾಶವಿದ್ದು, ಆಸಕ್ತರು ಇದರ ಪ್ರಯೋಜನ ಪಡೆಯಬಹುದು.
ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಕಾಯ್ದೆಯ ಅನ್ವಯ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹15,700 ರಿಂದ ₹25,000 ವರೆಗೆ ಅತ್ಯುತ್ತಮ ವೇತನ ನಿಗದಿಪಡಿಸಲಾಗಿದೆ. ಇದರೊಂದಿಗೆ ಅಭ್ಯರ್ಥಿಗಳಿಗೆ ಇಎಸ್‌ಐಸಿ (ESIC) ಹಾಗೂ ಇಪಿಎಫ್‌ಒ (EPFO) ಕಾನೂನುಬದ್ಧ ಸೌಲಭ್ಯಗಳು ಲಭ್ಯವಿರುತ್ತವೆ. ಕಂಪನಿಯ ವತಿಯಿಂದಲೇ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು, ವಿವಿಧ ಪಾಳಿಗಳಲ್ಲಿ (Shifts) ಕೆಲಸ ನಿರ್ವಹಿಸಲು ಅವಕಾಶವಿರುತ್ತದೆ. ಅಲ್ಲದೆ, ನಿಯಮಿತ ಹಾಜರಾತಿ ನಿರ್ವಹಿಸುವ ಅಭ್ಯರ್ಥಿಗಳಿಗೆ ವಿಶೇಷ ಅಟೆಂಡೆನ್ಸ್ ಬೋನಸ್ ಕೂಡ ನೀಡಲಾಗುತ್ತದೆ.
ಅಭ್ಯರ್ಥಿಗಳಿಗೆ ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ, ವಸಂತನರಸಾಪುರ ಕೈಗಾರಿಕಾ ಪ್ರದೇಶ ಹಾಗೂ ಹಿರೇಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸಲು ಅವಕಾಶವಿರುತ್ತದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಸಂಯೋಜಕರಾದ ನವೀನ್ ಜಿ. ಎಲ್. ಅವರನ್ನು +91 97431 03968 ಮೊಬೈಲ್ ಸಂಖ್ಯೆ ಅಥವಾ +91 97417 17700 ವಾಟ್ಸಾಪ್ ಸಂಖ್ಯೆ ಮೂಲಕ ಸಂಪರ್ಕಿಸಬಹುದಾಗಿದ್ದು, ಹೆಚ್ಚಿನ ವಿವರಗಳಿಗೆ www.golanaenterprises.com ಅಧಿಕೃತ ವೆಬ್‌ಸೈಟ್ ಭೇಟಿ ನೀಡಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
