ಬೆಂಗಳೂರು: ಬಹುಚರ್ಚಿತ ಚಿನ್ನದ ಕಳ್ಳಸಾಗಣೆ (Gold Smuggling) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಅವರಿಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಕೆಲ ದಿನಗಳ ಹಿಂದೆ ಚಿನ್ನದ ಕಳ್ಳಸಾಗಣೆ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಅಧಿಕಾರಿಗಳು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ. ನ್ಯಾಯಾಲಯವು ಜಾಮೀನು ನೀಡಿದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 22) ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ರನ್ಯಾ ರಾವ್ ಅವರು ಸುದೀಪ್ ನಟನೆಯ ‘ಮಾಣಿಕ್ಯ’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ಈ ಸ್ಮಗ್ಲಿಂಗ್ ಪ್ರಕರಣ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಸದ್ಯ ನ್ಯಾಯಾಲಯದ ಆದೇಶದಂತೆ ಅವರು ಜೈಲಿನಿಂದ ಹೊರಬರುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


