nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!

    October 1, 2026

    ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ

    October 1, 2026
    Facebook Twitter Instagram
    ಟ್ರೆಂಡಿಂಗ್
    • ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ
    • ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!
    • ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ
    • ಹಾಸನದ ಹೇಮಾವತಿ ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣಪತಿ ವಿಸರ್ಜನೆ: ಜಾನಪದ ಕಲಾ ವೈಭವದೊಂದಿಗೆ ಕಳೆಕಟ್ಟಿದ ಮೆರವಣಿಗೆ
    • ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್
    • ವಿವಿಧ ಅಭಿವೃದ್ಧಿ ಯೋಜನೆಗಳ ಭೂಸ್ವಾಧೀನ ಪ್ರಗತಿ ಪರಿಶೀಲನಾ ಸಭೆ
    • ಬರಪೀಡಿತ ಪ್ರದೇಶದಲ್ಲಿ ‘ಮರ’ಣಹೋಮ:  ಪ್ರಕರಣದಿಂದ ವ್ಯಾಪಾರಿ ಔಟ್: ಅರಣ್ಯ ಇಲಾಖೆ ನಡೆಗೆ ತೀವ್ರ ಸಂಶಯ
    • ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ: 9 ಮಂದಿಗೆ ಗಾಯ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ
    ರಾಜ್ಯ ಸುದ್ದಿ October 1, 2026

    ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ

    By Ganesh TumkuruOctober 1, 2026No Comments2 Mins Read
    ranya rao

    ಬೆಂಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಅಂತರರಾಷ್ಟ್ರೀಯ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ನಟಿ ಹರ್ಷವರ್ಧಿನಿ ಅಲಿಯಾಸ್ ರನ್ಯಾ ರಾವ್ ಅವರಿಗೆ ಕಸ್ಟಮ್ಸ್ ಇಲಾಖೆಯಿಂದ ಭಾರೀ ಶಾಕ್ ಎದುರಾಗಿದೆ. ಅಕ್ರಮವಾಗಿ ಚಿನ್ನ ಸಾಗಾಟ ಮಾಡಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ನಟಿ ರನ್ಯಾ ರಾವ್ ಅವರಿಗೆ 89 ಕೋಟಿ ರೂ. ದಂಡ ಪಾವತಿಸುವಂತೆ ಕಸ್ಟಮ್ಸ್ ಇಲಾಖೆ ಆದೇಶ ಹೊರಡಿಸಿದೆ.

    ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಅಕ್ರಮವಾಗಿ ದೊಡ್ಡ ಪ್ರಮಾಣದಲ್ಲಿ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಈ ಹಿಂದೆ ರನ್ಯಾ ರಾವ್ ಸೇರಿದಂತೆ ತರುಣ್, ಸಾಹಿಲ್ ಜೈನ್ ಹಾಗೂ ಭರತ್ ಜೈನ್ ಅವರನ್ನು ಬಂಧಿಸಿತ್ತು.

    ತನಿಖೆಯ ಪ್ರಕಾರ, 2024ರ ಮಾರ್ಚ್ 7ರಿಂದ 2025ರ ಫೆಬ್ರುವರಿ 18ರವರೆಗಿನ ಕೇವಲ ಒಂದು ವರ್ಷದ ಅವಧಿಯಲ್ಲಿ ಈ ತಂಡವು ಬರೋಬ್ಬರಿ 113 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಸಾಗಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

    ಕಸ್ಟಮ್ಸ್ ಕಾಯ್ದೆ–1962ರ ಅನ್ವಯ ಕಸ್ಟಮ್ಸ್ ಜಂಟಿ ನಿರ್ದೇಶಕ ಡಾ. ಸಂದೀಪ್ ಗುಂಜಾಲ್ ಅವರು ನಟಿ ರನ್ಯಾರಾವ್ ಅವರಿಗೆ 89 ಕೋಟಿ ರೂ. ದಂಡ ವಿಧಿಸಿದ್ದಾರೆ. ಇದರೊಂದಿಗೆ ಪ್ರಕರಣದ ಇತರೆ ಸಹ-ಆರೋಪಿಗಳಾದ ಸಾಹಿಲ್ ಜೈನ್ ಹಾಗೂ ಭರತ್ ಜೈನ್ ಅವರಿಗೆ 53 ಕೋಟಿ ರೂ. ಮತ್ತು ತರುಣ್ ಕೊಂಡರಾಜು ಅವರಿಗೆ 49 ಕೋಟಿ ರೂ. ದಂಡ ವಿಧಿಸಲಾಗಿದೆ.

    ಆರೋಪಿಗಳು ನಿಯಮಾನುಸಾರ ಈ ದಂಡದ ಮೊತ್ತವನ್ನು ಪಾವತಿಸಲು ವಿಫಲವಾದರೆ, ಕಾನೂನುರೀತ್ಯ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಸ್ಟಮ್ಸ್ ಇಲಾಖೆಗೆ ಅವಕಾಶ ಕಲ್ಪಿಸಲಾಗಿದೆ.

    2025ರ ಮಾರ್ಚ್ 3ರಂದು ದುಬೈನಿಂದ 12.56 ಕೋಟಿ ರೂ. ಮೌಲ್ಯದ 14.2 ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ವೇಳೆ ಡಿಆರ್‌ ಐ ಅಧಿಕಾರಿಗಳು ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ನಂತರ ನಿಗದಿತ ಅವಧಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗದ ಕಾರಣ ಅವರಿಗೆ ಡೀಫಾಲ್ಟ್ ಜಾಮೀನು ದೊರೆತಿದ್ದರೂ, ‘ಕಾಫೀಪೋಸಾ’ (COFEPOSA) ಕಾಯ್ದೆಯಡಿ ಬಂಧನದಲ್ಲಿದ್ದ ಕಾರಣ ಅವರು ಬಿಡುಗಡೆಗೊಂಡಿರಲಿಲ್ಲ. ಸುಮಾರು ಒಂದು ವರ್ಷದ ನಿಷೇಧಿತ ಬಂಧನದ ಅವಧಿ ಪೂರೈಸಿದ ಬಳಿಕ 2026ರ ಏಪ್ರಿಲ್‌ ನಲ್ಲಿ ಅವರು ಬಿಡುಗಡೆಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಬೆಂಗಳೂರಿಗರ ನಿದ್ದೆಗೆಡಿಸಿದ್ದ, ವೃದ್ಧನನ್ನು ಕೊಂದ ಕಾಡಾನೆ ಕೊನೆಗೂ ಬನ್ನೇರುಘಟ್ಟ ಅರಣ್ಯಕ್ಕೆ ವಾಪಸ್!

    September 30, 2026

    ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸಚಿವ ಬೈರತಿ ಸುರೇಶ್  ಹೇಳಿದ್ದೇನು?

    September 30, 2026

    2028ಕ್ಕೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    September 30, 2026

    Leave A Reply Cancel Reply

    Our Picks

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಕೆಗೆ ಅನುಗುಣವಾಗಿ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (OMCs) ಅಕ್ಟೋಬರ್ 1ರಿಂದ ಅನ್ವಯವಾಗುವಂತೆ…

    ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!

    October 1, 2026

    ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ

    October 1, 2026

    ಹಾಸನದ ಹೇಮಾವತಿ ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣಪತಿ ವಿಸರ್ಜನೆ: ಜಾನಪದ ಕಲಾ ವೈಭವದೊಂದಿಗೆ ಕಳೆಕಟ್ಟಿದ ಮೆರವಣಿಗೆ

    October 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.