ತುಮಕೂರು: ಹಿರೇಹಳ್ಳಿ ಎಸ್.ಬಿ.ಐ. ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆಯು ಫೆಬ್ರವರಿ 16ರಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ಊಟ ವಸತಿಯೊಂದಿಗೆ 30 ದಿನಗಳ ಮಹಿಳಾ ಟೈಲರಿಂಗ್ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 50 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ(ತುಮಕೂರು ನಿರ್ಮಿತಿ ಕೇಂದ್ರದ ಹತ್ತಿರ), ತುಮಕೂರು-572104 ಇವರಿಗೆ ಮುದ್ದಾಗಿ ಅಥವಾ ಅಂಚೆ ಮೂಲಕ ಫೆಬ್ರವರಿ 15ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 9738351048, 9663680001ನ್ನು ಸಂಪರ್ಕಿಸಬೇಕೆಂದು ಸಂಸ್ಥೆಯ ನಿರ್ದೇಶಕ ವಾದಿರಾಜ ಕೆ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


