ಮೈಸೂರು ಜಿಲ್ಲೆ , ಹುಣಸೂರು ತಾಲೂಕಿನ, ಬಿಳಿಕೆರೆ ಹೋಬಳಿಯ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಗೋಮ್ಮಟಗಿರಿಯ ಶ್ರೀ ಬಾಹುಬಲಿ ಮಹಾ ಮಸ್ತಕಾ ಭಿಷೇಕ ಡಿಸೆಂಬರ್ 12ರಿಂದ 15ರವರೆಗೆ ವೈಭವದಿಂದ ನಡೆದು ಸಂಪನ್ನಗೊಂಡಿತು.
ಶ್ರೀ ಕ್ಷೇತ್ರ ಹೊಂಬುಜ ಪೀಠಾಧ್ಯಕ್ಷರಾದ ಸ್ವಸ್ತಿ ಶ್ರೀ ಡಾ.ದೇವೇಂದ್ರ ಕೀರ್ತಿ ಭಟ್ಟರಕ ಭಟ್ಟಾಚಾರ್ಯ ಮಹಾಸ್ವಾಮಿಗಳವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರು ಕೀರ್ತಿ ಭಟ್ಟರಕ ಶ್ರೀಗಳು, ಶ್ರೀ ಕ್ಷೇತ್ರ ಕನಕಗಿರಿ ಜೈನ ಮಠ ದ ಸ್ವಸ್ತಿ ಶ್ರೀ ಭುವನ ಕೀರ್ತಿ ಭಟ್ಟರಕ ಮಹಾಸ್ವಾಮಿಗಳು, ಕಂಬದಹಳ್ಳಿ ಜೈನಮಠದ ಸ್ವಸ್ತಿ ಶ್ರೀ ಭಾನುಕೀರ್ತಿ ಭಟ್ಟಾರಕ ಶ್ರೀಗಳು, ಶ್ರೀ ಕ್ಷೇತ್ರ ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ದೇಶಕೇಂದ್ರಿ ಮಹಾಸ್ವಾಮಿಗಳು ಭಾಗವಹಿಸಿ ಪಾವನ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.
ನಾಲ್ಕು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ,ಮೇಘಾಲಯದ ರಾಜ್ಯಪಾಲರಾದ ಸಿ.ಎಚ್.ವಿಜಯ್ ಶಂಕರ್, ವಿಧಾನ ಪರಿಷತ್ ಸದಸ್ಯ ಗೋ ಮಧುಸೂಧನ್, ಹಳೇಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕ .ಎಸ್. ಶೃತಿ, ಮೈಸೂರು ಪದ್ಮಶ್ರೀ ಮಹಿಳಾ ಸಮಾಜದ ಅಧ್ಯಕ್ಷ ಲತಾ ಸುದರ್ಶನ್ , ಉಪಾಧ್ಯಕ್ಷರಾದ ಪದ್ಮಶ್ರೀ ದನಿಯಾ ಕುಮಾರ್, ವಂದನ ರಾಜೇಶ್, ಪ್ರಸನ್ನ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಲ್. ಆರ್., ಮಹದೇವಸ್ವಾಮಿ ಭಾರತೀಯ ಜೈನ್ ಮಿಲನ್ ಮೈಸೂರು ವಿಭಾಗದ ಎಂ.ರತ್ನರಾಜು, ಗೊಮ್ಮಟಗಿರಿ ಸೇವಾ ಸಮಿತಿಯ ಅಧ್ಯಕ್ಷರಾದ ಮನ್ಮಥರಾಜು, ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಹಾಗೂ ರತ್ನತ್ರೆಯ ಕ್ರಿಯೇಷನ್ ನಿರ್ದೇಶಿಕ ಡಾ.ನೀರಜಾ ನಾಗೇಂದ್ರ ಕುಮಾರ್, ತಹಶೀಲ್ದಾರ್ ಮಂಜುನಾಥ್, ಉದ್ಯಮಿ ವಿನೋದ್ ಬಾಕ್ಲಿ ವಾಲಾ, ಮಂಗಳೂರಿನ ನಿರಂಜನ್ ಜೈನ್ ಕುದ್ಯಾಡಿ ಇನ್ನಿತರರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಹಾ ಮಸ್ತಕಾಭಿಷೇಕ ಸ್ಮರಣ ಸಂಚಿಕೆ ಬಿಡುಗಡೆ, ಅಮೃತ ಕುಟೀರ ಉದ್ಘಾಟನೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುವುದರೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಕುಮುದ ನಾಗಭೂಷಣ್ ಕಾರ್ಯಕ್ರಮ ನಿರೂಪಿಸಿದರು.
ವರದಿ: ಜೆ.ರಂಗನಾಥ, ತುಮಕೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx