ಕೊರಟಗೆರೆ: ತುಮಕೂರು ಜಿಲ್ಲಾ ಧಾರ್ಮಿಕ ಪರಿಷತ್ತಿನ ನಾಮನಿರ್ದೇಶಿತ ಸದಸ್ಯರಾಗಿ ಕೊರಟಗೆರೆ ತಾಲ್ಲೂಕಿನಿಂದ ಗೊಂದಿಹಳ್ಳಿ ರಂಗರಾಜು ನಾಮ ನಿರ್ದೇಶಿತರಾಗಿದ್ದಾರೆ.
ತುಮಕೂರು ಜಿಲ್ಲಾ ಧಾರ್ಮಿಕ ಪರಿಷತ್ತಿಗೆ 8 ಮಂದಿ ನಿರ್ದೇಶಕರ ನಾಮನಿರ್ದೇಶನಗೊಂಡಿದ್ದು ಗೃಹ ಸಚಿವ ಡಾ.ಜಿ.ಪರಮೇಶ್ವರ ರವರ ಶಿಪಾರಸಿನ ಮೇರೆಗೆ ತಾಲ್ಲೂಕಿನಿಂದ ಹಲವು ಧಾರ್ಮಿಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಜಿ.ಎಸ್.ರಂಗರಾಜು (ಗೊಂದಿಹಳ್ಳಿ) ನಾಮನಿರ್ದೇಶನಗೊಂಡಿದ್ದು ಜಿಲ್ಲಾಧಿಕಾರಿಗಳು ಈ ಪರಿಷತ್ತಿನ ಅಧ್ಯಕ್ಷರಾಗಿದ್ದು, ಮುಜರಾಯಿ ತಹಶೀಲ್ದಾರ್ ಪದನಿಮಿತ್ತ ಕಾರ್ಯದರ್ಶಿಯಾಗಿರುತ್ತಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4