ನವದೆಹಲಿ: ಭಾರತದ ಸಾಂಪ್ರದಾಯಿಕ ಗೋಲಿ ಸೋಡಾಕ್ಕೆ ವಿದೇಶಿ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ವ್ಯಕ್ತವಾಗಿದೆ. ಗೋಲಿ ಸೋಡಾವನ್ನು ಗೋಲಿ ಪಾಪ್ ಸೋಡಾ ಎಂದು ಮರುನಾಮಕರಣ ಮಾಡಲಾಗಿದ್ದು, ವಿವಿಧ ದೇಶಗಳ ಮಾರುಕಟ್ಟೆಯಲ್ಲಿ ಉತ್ತಮ ರೆಸ್ಪಾನ್ಸ್ ದೊರಕಿದೆ.
ಯುಎಸ್, ಯುಕೆ, ಯುರೋಪ್ ಮತ್ತು ಗಲ್ಫ್ ಸೇರಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಗೋಲಿ ಸೋಡಾಕ್ಕೆ ಉತ್ತಮ ರೆಸ್ಪಾನ್ಸ್ ದೊರಕಿದೆ ಎಂದು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ.
ಕಾರ್ಯತಂತ್ರದ ವಿಸ್ತರಣೆ ಮತ್ತು ನವೀನ ಮರುಶೋಧನೆಯಿಂದ ಬೇಡಿಕೆ ಹೆಚ್ಚಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಭಾರತದ ಸ್ವಂತ ಗೋಲಿ ಪಾಪ್ ಸೋಡಾ ವಿಶ್ವಾದ್ಯಂತ ವಾವ್ ಟೇಸ್ಟ್ ಬಡ್ ಗಳಿಗೆ ಮರಳುತ್ತದೆ! ಸಾಂಪ್ರದಾಯಿಕ ಭಾರತೀಯ ಗೋಲಿ ಸೋಡಾದ ಪುನರುಜ್ಜೀವನವನ್ನು ಉತ್ತೇಜಿಸಿದ್ದಕ್ಕಾಗಿ ಅಭಿನಂದನೆಗಳು ಎಂದು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4