nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಿ: ಡಾ.ಚಂದ್ರಶೇಖರ್ ಬಿ.ಎಂ.
    ತುಮಕೂರು January 22, 2025

    ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಿ: ಡಾ.ಚಂದ್ರಶೇಖರ್ ಬಿ.ಎಂ.

    By adminJanuary 22, 2025No Comments2 Mins Read
    chandra shekhar

    ತುಮಕೂರು: ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ, ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ. ಚಂದ್ರಶೇಖರ್ ತಿಳಿಸಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಬೆಳ್ಳಾವಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾವಿ ಗ್ರಾಮ ಪಂಚಾಯತಿ ಹಾಗೂ ಶ್ರೀದೇವಿ ಮೆಡಿಕಲ್ ಕಾಲೇಜು ಆಸ್ಪತ್ರೆ ಗ್ರಾಮೀಣ ತರಬೇತಿ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಸಿಂಗೀಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ “ಉಚಿತ ಆರೋಗ್ಯ ತಪಾಸಣೆ ಮತ್ತು ಕ್ಷಯರೋಗ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆರೋಗ್ಯಕ್ಕಾಗಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

    ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮೋಹನ್ ದಾಸ್ ಮಾತನಾಡಿ, ಕ್ಷಯರೋಗ ಸಂಪೂರ್ಣವಾಗಿ ಗುಣಪಡಿಸಬಹುದಾದ ಒಂದು ರೋಗವಾಗಿದೆ. ಭಾರತವನ್ನು ಕ್ಷಯ ಮುಕ್ತವನ್ನಾಗಿಸಲು ಕರ್ನಾಟಕ ಸರ್ಕಾರ ನೂರು ದಿನಗಳ ಕ್ಷಯ ಮುಕ್ತ ಅಭಿಯಾನವನ್ನು ಹಮ್ಮಿಕೊಂಡಿದ್ದು, 2 ವಾರಕ್ಕಿಂತ ಹೆಚ್ಚು ಕೆಮ್ಮು ಅಥವಾ ಜ್ವರ, ತೂಕದಲ್ಲಿ ಇಳಿಕೆ, ಕಫದಲ್ಲಿ ರಕ್ತ ಬೀಳುವುದು, ಹಸಿವು ಆಗದೇ ಇರುವುದು, ರಾತ್ರಿ ವೇಳೆ ಬೆವರುವುದು, ದೇಹದಲ್ಲಿ ಗಂಟುಗಳು ಕಂಡು ಬಂದಲ್ಲಿ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಸಬೇಕು. ಪ್ರತಿಯೊಬ್ಬರಿಗೂ ಕ್ಷಯ ರೋಗದ ಕುರಿತು ಜಾಗೃತಿಯನ್ನು ಮೂಡಿಸುವ ಮುಖಾಂತರ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಕ್ಷಯ ಮುಕ್ತ ಗ್ರಾಮವನ್ನಾಗಿಸಲು ಸಹಕರಿಸಬೇಕು ಎಂದು ತಿಳಿಸಿದರು.

    ಶ್ರೀದೇವಿ ಮೆಡಿಕಲ್ ಕಾಲೇಜು ಆಸ್ಪತ್ರೆ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ರಂಗಸ್ವಾಮಿ ಮಾತನಾಡಿ, ಕುಷ್ಟ ರೋಗ ಹಾಗೂ ಅಸಾಂಕ್ರಾಮಿಕ ರೋಗಗಳ ಕುರಿತು ಮಾಹಿತಿ ನೀಡಿದರು.

    ಬೆಳ್ಳಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಧಾಕೃಷ್ಣ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿರುವ ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
    ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ಉಪನ್ಯಾಸಕ ಡಾ.ಮಂಜುನಾಥ್ ಟಿ.ಎ. ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ಈ ಕಾರ್ಯಕ್ರಮದಲ್ಲಿ ಬೆಳ್ಳಾವಿಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕಮ್ಮ ದೊಡ್ಡಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ವಸಂತ ಹಾಗೂ ರಮೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಓಬಳಯ್ಯ, ಬೆಂಗಳೂರಿನ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಪಿಜಿಡಿಎಚ್ಪಿ ಕೋರ್ಸಿನ ಉಪನ್ಯಾಸಕರುಗಳಾದ ಡಾ.ಎಂ. ಬೃಂದಾಲಕ್ಷಿö್ಮ, ತನ್ವೀರ್ ಅಹ್ಮದ್ ಖಾನ್, ಶ್ರೀದೇವಿ ಮೆಡಿಕಲ್ ಕಾಲೇಜಿನ ವೈದ್ಯರು ಮತ್ತು ಸಿಬ್ಬಂದಿ, ಗ್ರಾಮ ಪಂಚಾಯಿತಿಯ ಹಾಲಿ ಸದಸ್ಯರು ಮತ್ತು ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    ಕಾರ್ಯಕ್ರಮದ ನಿರೂಪಣೆ ಪಿಜಿಡಿಎಚ್ಪಿ ಪ್ರಶಿಕ್ಷಣಾರ್ಥಿ ಗುರುರಾಜ್ ಎಚ್.ಎಮ್. ನೆರವೇರಿಸಿದರು. ಪಿಜಿಡಿಎಚ್ಪಿ ಪ್ರಶಿಕ್ಷಣಾರ್ಥಿಗಳಾದ ಜಯಶೀಲ ಹಿರೇಮಠ್, ಅಸ್ಲಾಂ ಅಬಾಲೆ, ರೇಖಾ ಡಿ.ಎನ್., ಸಹ ಪ್ರಶಿಕ್ಷಣಾರ್ಥಿಗಳು, ಆರೋಗ್ಯ ನಿರೀಕ್ಷಣಾಧಿಕಾರಿ ಜಗದೀಶ್ ಮತ್ತು ಲಕ್ಷ್ಮೀ ಸಮುದಾಯ ಆರೋಗ್ಯ ಅಧಿಕಾರಿಗಳು, ಶೋಭಾ ಆಶಾ ಕಾರ್ಯಕರ್ತೆ ಮತ್ತು ಇತರೆ ಆಶಾ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.