ತುಮಕೂರು: ಭಾರತ ಸರ್ಕಾರದ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕರ ಕುಂದುಕೊರತೆಗಳ ಇಲಾಖೆ ವತಿಯಿಂದ ಡಿಸೆಂಬರ್ 24ರವರೆಗೆ “ಸುಶಾಸನ ಸಪ್ತಾಹ–ಪ್ರಶಾಸನ ಗ್ರಾಮಗಳ ಕಡೆಗೆ” ಎಂಬ ಅಭಿಯಾನವನ್ನು ಕೈಗೊಳ್ಳುವಂತೆ ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 23ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಈ ಅಭಿಯಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ವತಿಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಮಟ್ಟದಲ್ಲಿ ವಿಶೇಷ ಶಿಬಿರ/ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಇದರಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಹಾಗೂ ಉತ್ತಮ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.
ಈ ಕಾರ್ಯಾಗಾರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರವು ಉತ್ತಮ ಆಡಳಿತ ನೀಡುವ ಬಗ್ಗೆ ತಮ್ಮ ಸಲಹೆಗಳನ್ನು ನೀಡಬೇಕೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx