ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ., ಆದ್ಯತಾ ಹಾಗೂ ಬಿ.ಪಿ.ಎಲ್. ಪಡಿತರ ಚೀಟಿದಾರರಿಗೆ 3 ಕೆ.ಜಿ. ಅಕ್ಕಿ, ರಾಗಿ 2 ಕೆ.ಜಿ. ಉಚಿತವಾಗಿ ವಿತರಿಸಲಾಗುತ್ತದೆ.
ಸರ್ಕಾರದ ಗ್ಯಾರಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ತಹಶೀಲ್ದಾರ್ ಡಾ.ಎಂ.ಬಿ.ಅಶ್ವಥ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


