ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ಕಟ್ಟಲು ಈ ಹಿಂದೆ ಶೇ 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಡಿಸ್ಕೌಂಟ್ ನೀಡಿದ್ದಾರೆ.
ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023ರ ಫೆಬ್ರವರಿ 11ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಲು ಈ ಹಿಂದೆ ಆದೇಶಿಸಲಾಗಿತ್ತು.
ಇದೀಗ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ 50ರ ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


