ಮೆಟ್ರೋ ರೈಲು ಪ್ರಯಾಣಿಕರಿಗೆ ಬಿಎಮ್‌ಆರ್‌ಸಿಎಲ್ ಸಿಹಿ ಸುದ್ದಿ ನೀಡಿದೆ. ಇಂದಿನಿಂದಲೇ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲು ಸೇವೆ ಆರಂಭಿಸಲಾಗುವುದು.ಇಂದಿನಿಂದಲೇ ಜಾರಿಗೆ ಬರುವಂತೆ ಆರು ಹೆಚ್ಚುವರಿ ರೈಲುಗಳ ಸೇರ್ಪಡೆ ಮಾಡಲಾಗುತ್ತದೆ.
ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ನಡೆಸುತ್ತಿದ್ದವು. ಇಂದಿನಿಂದ ಒಟ್ಟು 15 ರೈಲುಗಳು ನೇರಳೆ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಲಿವೆ. ಈ 15 ರೈಲುಗಳಲ್ಲಿ 10 ರೈಲುಗಳು ಪಟ್ಟಂದೂರು ಅಗ್ರಹಾರದ ವರೆಗೆ, 4 ರೈಲುಗಳು ವೈಟ್‌ಫೀಲ್ಡ್ ಹಾಗೂ 1 ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸುತ್ತದೆ.
ಪ್ರಸ್ತುತ ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ/ ವೈಟ್‌ಫೀಲ್ಡ್ ವರೆಗೆ ವಿಸ್ತರಿಸಲಾಗಿದೆ. ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.
ಮೆಜೆಸ್ಟಿಕ್ ನಿಲ್ದಾಣದಿಂದ ಎಲ್ಲಾ ಹೆಚ್ಚುವರಿ ಮೆಟ್ರೋ ರೈಲುಗಳು ಸಂಚರಿಸಲಿವೆ. ಇಂದಿನಿಂದ ನೇರಳೆ ಮಾರ್ಗದಲ್ಲಿ ಪ್ರತಿ 3.5 ನಿಮಿಷಕ್ಕೊಂದು ರೈಲುಗಳು ಸಂಚಾರ ಇರುತ್ತದೆ. ಇನ್ನುಳಿದಂತೆ ಮೆಟ್ರೋ ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA