2024-25ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿರುವ ಶೇ.5ರ ರಿಯಾಯಿತಿ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಏಪ್ರಿಲ್ ತಿಂಗಳಲ್ಲಿ ನೀಡಲಾಗುತ್ತಿರುವ ಶೇ.5% ರಿಯಾಯಿತಿಯನ್ನು ದಿ:31-07-2024 ರವರೆಗೆ ವಿಸ್ತರಿಸಲು ಪೌರಾಡಳಿತ ನಿರ್ದೇಶನಾಲಯ ಸರ್ಕಾರಕ್ಕೆ ಪ್ರಸ್ತಾಪಿಸಿದೆ.
ಈಗಾಗಲೇ ರಾಜ್ಯದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ಸಲುವಾಗಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ, ಶೇಕಡಾ 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ದಿನಾಂಕ: 31.07.2024ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.
ಪ್ರಸ್ತಾವನೆಗಳಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ 105(1)ರನ್ವಯ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ) ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ, ಶೇಕಡಾ 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ದಿನಾಂಕ: 31.07.2024ರವರೆಗೆ ವಿಸ್ತರಿಸಿ ಆದೇಶಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA