nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026
    Facebook Twitter Instagram
    ಟ್ರೆಂಡಿಂಗ್
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    • ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    ರಾಜ್ಯ ಸುದ್ದಿ August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    By Ganesh TumkuruAugust 28, 2026No Comments2 Mins Read
    g parameshwar.jpg

    ಬೆಂಗಳೂರು: ರಾಜ್ಯದ ವಸತಿ ರಹಿತರಿಗೆ ಹಾಗೂ ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 50,000 ವಸತಿ ನಿವೇಶನಗಳನ್ನು ಅಭಿವೃದ್ಧಿಪಡಿಸಿ, ಮುಂಬರುವ ಡಿಸೆಂಬರ್ 31ರ ಒಳಗಾಗಿ ಒಟ್ಟು 5 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ಕಂದಾಯ ಇಲಾಖೆ ಸಜ್ಜಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

    ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಈ ಮಹತ್ವದ ಘೋಷಣೆ ಮಾಡಿದರು.

    ಸೆಪ್ಟೆಂಬರ್‌ 15ರೊಳಗೆ ನಿವೇಶನಕ್ಕಾಗಿ ಸೂಕ್ತ ಸರ್ಕಾರಿ ಜಮೀನುಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗುರುತಿಸುವ ಜಮೀನುಗಳಿಗೆ ರಸ್ತೆ ಹಾಗೂ ನೀರಿನ ಸೌಲಭ್ಯವಿರಬೇಕು ಮತ್ತು ಗ್ರಾಮಗಳಿಗೆ ಸಮೀಪವಿರುವ ಜಮೀನುಗಳಿಗೆ ಆದ್ಯತೆ ನೀಡಬೇಕು ಎಂದರು.

    ನಿವೇಶನ ಹಂಚಿಕೆಯಲ್ಲಿ ಸಮಾಜದ ದುರ್ಬಲ ವರ್ಗಗಳಿಗೆ ಹೆಚ್ಚಿನ ಮುನ್ನೆಲೆ ನೀಡಲಾಗುವುದು. ಪರಿಶಿಷ್ಟ ಜಾತಿ (SC), ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಅಂಗವಿಕಲರು, ವಿಧವೆಯರು ಹಾಗೂ ಲೈಂಗಿಕ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

    ರಾಜ್ಯದಲ್ಲಿ 10,896 ಕಂದಾಯ ಗ್ರಾಮಗಳನ್ನು ಘೋಷಿಸುವ ಗುರಿ ಹೊಂದಲಾಗಿದ್ದು, ಈವರೆಗೆ ಕೇವಲ 3,354 ಗ್ರಾಮಗಳನ್ನು ಮಾತ್ರ ಘೋಷಿಸಿರುವುದಕ್ಕೆ ಡಿಸಿಎಂ ಅಸಮಾಧಾನ ವ್ಯಕ್ತಪಡಿಸಿದರು. ಬಾಕಿ ಇರುವ ಪ್ರಸ್ತಾವನೆಗಳನ್ನು 15 ದಿನಗಳೊಳಗೆ ಪ್ರಾಥಮಿಕ ಅಧಿಸೂಚನೆಗಾಗಿ ಕಳುಹಿಸಬೇಕು ಎಂದು ತಾಕೀತು ಮಾಡಿದರು.

    ಈವರೆಗೆ 2.05 ಲಕ್ಷ ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, ಸುಮಾರು 1.55 ಲಕ್ಷ ಹಕ್ಕುಪತ್ರಗಳು ನೋಂದಣಿಯಾಗಿವೆ. ಉಳಿದ ಹಕ್ಕುಪತ್ರಗಳ ನೋಂದಣಿ ಪ್ರಕ್ರಿಯೆಯನ್ನು ಸೆಪ್ಟೆಂಬರ್‌ 30ರೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ.

    10 ಜಿಲ್ಲೆಗಳಲ್ಲಿ ಭೂ ದಾಖಲೆಗಳ ಡಿಜಿಟಲೀಕರಣ ಪೂರ್ಣಗೊಂಡಿದ್ದು, ಇನ್ನೂ 21 ಜಿಲ್ಲೆಗಳಲ್ಲಿ ಬಾಕಿ ಇದೆ. ಒಟ್ಟು 24.43 ಕೋಟಿ ಪುಟಗಳ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಬೇಕಿದೆ. ಅಲ್ಲದೆ, ಬಗೈರ್‌ ಹುಕುಂ ಅರ್ಜಿಗಳ ವಿಲೇವಾರಿಯನ್ನು (ಸ್ವೀಕೃತವಾದ 14.37 ಲಕ್ಷ ಅರ್ಜಿಗಳಲ್ಲಿ ಬಾಕಿ ಇರುವ ಸುಮಾರು 6.99 ಲಕ್ಷ ಅರ್ಜಿಗಳು) ತ್ವರಿತಗೊಳಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    g parameshwar
    Ganesh Tumkuru
    • Website

    Related Posts

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ

    September 13, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಮೈಸೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಲಾಗಿರುವ ನೂತನ ಮನೆಯ…

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.