ಅಶ್ವಿನ್ ವೈಷ್ಣವ್ ಅವರು ರೈಲ್ವೇ ಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ರೈಲ್ವೇ ಇಲಾಖೆ ಅಧಿಕಾರಿಗಳ ಜೊತೆ ಉನ್ನತ ಸಭೆ ನಡೆಸಿದ್ದು, ಮಹತ್ವದ ಹೇಳಿಕೆ ನೀಡಿದ್ದಾರೆ. ಇನ್ನು ಭಾರತೀಯ ರೈಲ್ವೇಯಲ್ಲಿ ಮಹತ್ತರ ಬದಲಾವಣೆ ತರಲಾಗುತ್ತಿದೆ.
ಪ್ರಮುಖವಾಗಿ 2032ರ ವೇಳೆಗೆ ಭಾರತೀಯ ರೈಲ್ವೇ ಸಂಪೂರ್ಣ ಬದಲಾಗಲಿದೆ. ಟಿಕೆಟ್ ಬುಕಿಂಗ್, ಟಿಕೆಟ್ ಕನ್ ಫರ್ಮ್ ಸುಲಭ. ರೈಲು ಪ್ರಯಾಣ ಆರಾಮದಾಯಕವಾಗಲಿದೆ. ಕಿಕ್ಕಿರಿದು ತುಂಬಿದ ರೈಲುಗಳು ಇರುವುದಿಲ್ಲ. ಕಾರಣ ರೈಲು ಸಂಖ್ಯೆ, ಸೇವೆ ಹೆಚ್ಚಿಸಲಾಗುತ್ತಿದೆ. ರೈಲು ಪ್ರಯಾಣಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 40 ಮಿಲಿಯನ್ ಪ್ರಯಾಣಿಕರು ಕೇವಲ ಬೇಸಿಗೆಯಲ್ಲಿ ಪ್ರಯಾಣಿಸಿದ್ದಾರೆ ಎಂದು ವೈಷ್ಣವ್ ಹೇಳಿದ್ದಾರೆ.
ಪ್ರಯಾಣಿಕರು ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ರೈಲುಗಳ ಸಂಖ್ಯೆಯನ್ನೂ ಹೆಚ್ಚಿಸಲಾಗುತ್ತಿದೆ. ಭಾರತದ ಮೂಲೆ ಮೂಲೆಗೆ ರೈಲು ಸೇವೆಗಳನ್ನು ನೀಡಲಾಗುತ್ತದೆ. ಯಾವುದೇ ವೈಟಿಂಗ್ ಲಿಸ್ಟ್ ಗೆ ಕಾಯದೇ ಸೀಟುಗಳನ್ನು ರಿಸರ್ವ್ ಮಾಡಲು ಸಾಧ್ಯವಿದೆ. 2032ರ ವೇಳೆಗೆ ಭಾರತೀಯ ರೈಲ್ವೇ ಸಂಪೂರ್ಣ ಬದಲಾಗಲಿದೆ. ಆಧುನಿಕತೆ ಪಡೆದುಕೊಳ್ಳಲಿದೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA