ಮಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಹಣ ಸಿಗಲಿದೆ. ತೃತೀಯ ಲಿಂಗಿಗಳಿಗೆ ಹಣ ನೀಡಲು ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆದೇಶ ಆಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ತಿಂಗಳ ಕೊನೆಯ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಜಿಲ್ಲಾಧಿಕಾರಿಗಳಿಂದ ವಿತರಿಲ್ಪಟ್ಟ ಗುರುತಿನ ಚೀಟಿ ಇದ್ದರೆ ತೃತೀಯ ಲಿಂಗಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಈ ತಿಂಗಳ ಒಳಗಡೆ ಅರ್ಜಿ ಸಲ್ಲಿಕೆಯಾದ್ರೆ ಮುಂದಿನ ತಿಂಗಳೇ ತೃತೀಯ ಲಿಂಗಿಗಳ ಅಕೌಂಟ್ ಗೆ ಎರಡು ಸಾವಿರ ರೂಪಾಯಿ ಹಣ ಬರಲಿದೆ. ರಾಜ್ಯದಲ್ಲಿ 40,000 ಹೆಚ್ಚು ತೃತೀಯ ಲಿಂಗಿಗಳಿದ್ದು ಅವರ ಅಭಿವೃದ್ಧಿಗೆ ಅಥವಾ ಜೀವನೋಪಾಯಕ್ಕೆ ಗೃಹಲಕ್ಷ್ಮಿ ಹಣ ಸಹಕಾರಿಯಾಗಲಿದೆ. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈಗಾಗಲೇ 1.24 ಕೋಟಿ ಮಂದಿ ಗೃಹಲಕ್ಷ್ಮಿ ಯೋಜನೆಗೆ ನೊಂದಾಣಿ ಮಾಡಿಕೊಂಡಿದ್ದಾರೆ. ಅದರಲ್ಲಿ 1.25 ಕೋಟಿ ಮಂದಿ 2 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದು 1.5 ಲಕ್ಷ ಮಂದಿ ಜಿಎಸ್ಟಿ ಮತ್ತು ಆದಾಯ ತೆರಿಗೆ ಪಾವತಿ ದಾರರಾಗಿದ್ದು ಅವರಿಗೆ ಹಣ ಸಂದಾಯ ಸ್ಥಗಿತ ಮಾಡಲಾಗಿದೆ.
ಜೊತೆಗೆ ಮೇ ತಿಂಗಳವರೆಗೂ ಹಣ ಸಂದಾಯ ಆಗಿದ್ದು ಜೂನ್ ತಿಂಗಳ ಹಣ ವರ್ಗಾವಣೆಯಾಗಬೇಕಿದೆ. ತೃತೀಯ ಲಿಂಗಿಗಳಿಗೆ ಗೃಹಲಕ್ಷ್ಮಿ ಹಣ ನೀಡುವ ಬಗ್ಗೆ ತೃತೀಯ ಲಿಂಗಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಜನ ಮಂಗಳಮುಖಿಯರು ಕಷ್ಟದಲ್ಲಿದ್ದಾರೆ. ಅಂತಹವರಿಗೆ ಈ ಹಣ ಸಾಕಷ್ಟು ಅನುಕೂಲವಾಗಲಿದೆ. ಐದು ಸ್ಕೀಮ್ ಪೈಕಿ ಶಕ್ತಿ ಯೋಜನೆ ನಮ್ಮ ಕೈ ಸೇರಿತ್ತು. ಆದ್ರೆ ಗೃಹಲಕ್ಷ್ಮಿ ಹಣ ಸಿಕ್ಕಿರಲಿಲ್ಲ. ಇದೀಗ ಎಲ್ಲ ಮಹಿಳೆಯರಂತೆ ನಮಗೂ ಈ ಹಣ ಸಿಗಲಿದೆ ಎಂದು ಸರ್ಕಾರಕ್ಕೆ ದನ್ಯವಾದ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


