ಹುಬ್ಬಳ್ಳಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಯುವನಿಧಿ’ ಯೋಜನೆಯ ಫಲಾನುಭವಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ‘ಯುವನಿಧಿ ಪ್ಲಸ್’ ಕಾರ್ಯಕ್ರಮದಡಿ ಉಚಿತ ಕೌಶಲ್ಯ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹುಬ್ಬಳ್ಳಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (GTTC) ಈ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಯಾವೆಲ್ಲಾ ಕೋರ್ಸ್‌ಗಳಲ್ಲಿ ತರಬೇತಿ ಲಭ್ಯ?
- ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಯುವಕ-ಯುವತಿಯರಿಗೆ ಉದ್ಯೋಗಾಧಾರಿತ ವಿವಿಧ ವೃತ್ತಿಗಳಲ್ಲಿ ಉಚಿತ ತರಬೇತಿ ನೀಡಲಾಗುತ್ತದೆ. ಪ್ರಮುಖ ಕೋರ್ಸ್‌ಗಳು ಇಲ್ಲಿವೆ:
- ಅಕೌಂಟ್ಸ್ ಎಕ್ಸಿಕ್ಯೂಟಿವ್ (Accounts Executive)
- ಡಿಜಿಟಲ್ ಮಾರ್ಕೆಟಿಂಗ್ (Digital Marketing)
- ಸೇಲ್ಸ್ ಎಕ್ಸಿಕ್ಯೂಟಿವ್ (Sales Executive)
- ಸ್ಯಾಪ್ (SAP)
- ಐಓಟಿ (IoT)
- ಪಿಎಲ್‌ಸಿ ಪ್ರೋಗ್ರಾಮಿಂಗ್ (PLC Programming)
- ಕ್ಯಾಡ್-ಕ್ಯಾಮ್ (CAD-CAM) ಹಾಗೂ ಸಿಎನ್‌ಸಿ (CNC)
ಈ ತರಬೇತಿಯು ಯಶಸ್ವಿಯಾಗಿ ಪೂರ್ಣಗೊಂಡ ನಂತರ, ಅಭ್ಯರ್ಥಿಗಳಿಗೆ ಸ್ಥಳೀಯವಾಗಿ ಉತ್ತಮ ವೇತನದೊಂದಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 03
ತರಬೇತಿ ಪ್ರಾರಂಭ: ಅಕ್ಟೋಬರ್ 05 ರಿಂದ
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ), ಇಂಡಸ್ಟ್ರಿಯಲ್ ಎಸ್ಟೇಟ್, ಗೋಕುಲ ರಸ್ತೆ, ಹುಬ್ಬಳ್ಳಿ ಇಲ್ಲಿಗೆ ನೇರವಾಗಿ ಭೇಟಿ ನೀಡಬಹುದು. ಇಲ್ಲವೇ 0836-2333159 ಅಥವಾ 8123719773 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಜಿಟಿಟಿಸಿ ಪ್ರಾಂಶುಪಾಲರಾದ ಮಾರುತಿ ಭಜಂತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
