ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರೆ ನೀಡಲಾಗಿರುವ ಲಾರಿ ಮಾಲಿಕರ ಅನಿರ್ದಿಷ್ಟ ಅವಧಿಗೆ ಮುಷ್ಕರಕ್ಕೆ ತುಮಕೂರು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹೆದ್ದಾರಿಗಳಲ್ಲಿ ಸಾಗುತ್ತಿದ್ದ ಲಾರಿಗಳನ್ನು ಅಡ್ಡ ಹಾಕಿದ ತುಮಕೂರು ಲಾರಿ ಮಾಲೀಕರ ಸಂಘದ ಸದಸ್ಯರು ಅಧ್ಯಕ್ಷ ಮುಜಾಮಿಲ್ ಪಾಷಾ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಅಲ್ಲದೆ ಬಂದ್ ಗೆ ಬೆಂಬಲ ನೀಡುವಂತೆ ಲಾರಿ ಮಾಲಿಕರಲ್ಲಿ ಹಾಗೂ ಚಾಲಕರಲ್ಲಿ ಮನವಿ ಮಾಡಿದರು. ಕೇಂದ್ರ ಸರ್ಕಾರ ಡೀಸೆಲ್ ಬೆಲೆ ಏರಿಕೆ ಮಾಡಿರುವುದುನ್ನು ತಿಳಿಸಬೇಕು, ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಹಣವನ್ನು ತೆಗೆದು ಹಾಕಬೇಕು, ರಾಜ್ಯದ ಗಡಿ ಭಾಗದಲ್ಲಿ ಇರುವ ಚೆಕ್ ಪೋಸ್ಟ್ ಗಳನ್ನು ತೆಗೆದು ಹಾಕಬೇಕು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಇಂದು ತುಮಕೂರು ಜಿಲ್ಲಾ ಟ್ರಕ್ ಮಾಲೀಕರ ಸಂಘದ ವತಿಯಿಂದ ಪ್ರತಿಭಟನಾ ಧರಣಿ ನಡೆಸಲಾಯಿತು.
ಪ್ರಸ್ತುತ ಟೈರು ಬೆಲೆ, ಡೀಸೆಲ್ ಬೆಲೆ, ಸ್ಪೇರ್ ಪಾರ್ಟ್ಸ್ ಗಳ ಬೆಲೆ ಜಾಸ್ತಿ ಆಗಿದೆ. ಆದರೆ ಬಾಡಿಗೆ ಮಾತ್ರ ಜಾಸ್ತಿ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಲಾರಿ ಮಾಲಿಕರು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುವಂತೆ ಆಗಿದೆ. ಲಾರಿ ಮಾಲಿಕರು ಆರ್ಥಿಕ ಸಂಕಷ್ಟದಿಂದ ಬಳಲುವಂತಾಗಿದೆ ಎಂದು ಲಾರಿ ಮಾಲಿಕರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW