ತುರುವೇಕೆರೆ: ಕಾವೇರಿ ನೀರು ತಮಿಳುನಾಡಿಗೆ ಬಿಟ್ಟಿರುವ ವಿಚಾರವಾಗಿ ಇಂದು ನಡೆಯುತ್ತಿರುವ ಕರ್ನಾಟಕ ಬಂದ್ ಗೆ ತುರುವೇಕೆರೆ ಪಟ್ಟಣ ಸ್ತಬ್ಧವಾಗಿದೆ.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜನಸಂದಣಿ ವಿರುಳವಾಗಿದ್ದು ರಸ್ತೆ ಸಂಚಾರ ಸುಗಮವಾಗಿದೆ. ಆಸ್ಪತ್ರೆ ಮೆಡಿಕಲ್ ಶಾಪ್ ಹಾಲು ಬಿಟ್ಟು ಮಿಕ್ಕಿಲ್ಲ ಅಂಗಡಿ ಮುಖಂಡರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕರುನಾಡ ವಿಜಯ ಸೇನೆ ವಿವಿಧ ಪ್ರಗತಿಪರ ಸಂಘಟನೆಗಳು ಬೀದಿಬದಿ ವ್ಯಾಪಾರಿಗಳು ಸಾರ್ವಜನಿಕರಿಂದ ವ್ಯಾಪಾರಿಗಳಿಂದ ಮಿಶ್ರ ಪ್ರತಿಕ್ರಿಯೆ ದೊರೆತಿದೆ.
ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದೆ ನಿಂತಲ್ಲಿಯೇ ಬಸ್ ಗಳು ನಿಂತಿವೆ ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿದ್ದು ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿದೆ.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ