ಸರಗೂರು: ತಾಲೂಕಿನ ಪಟ್ಟಣದ ಕಬಿನಿ ಬಲದಂಡೆ ನಾಲೆಯ ಬಳಿ ಗೂಡ್ಸ್ ಆಟೋ ಪಲ್ಟಿಯಾಗಿ 15 ಜನ ಕೂಲಿ ಕಾರ್ಮಿಕರು ಗಾಯಗೊಂಡ ಹಿನ್ನೆಲೆಯಲ್ಲಿ ಶುಕ್ರವಾರದಂದು ಸ್ವಾಮಿ ವಿವೇಕಾನಂದ ಆಸ್ಪತ್ರೆಗೆ ಜೆಡಿಎಸ್ ಪಕ್ಷದ ಮುಖಂಡ ಕೆ.ಎಂ.ಕೃಷ್ಣನಾಯಕ ಭೇಟಿ ನೀಡಿ ಗಾಯಾಳುಗಳನ್ನು ಆರೋಗ್ಯ ಬಗ್ಗೆ ವಿಚಾರಿಸಿ ಸಹಾಯಧನ ಮಾಡಿ ಆಸ್ಪತ್ರೆಯ ವ್ಯವಸ್ಥಾಪಕರಿಗೆ ಜೊತೆ ಮಾತುಕತೆ ನಡೆಸಿ ಹೆಚ್ಚಿನ ಚಿಕಿತ್ಸೆ ನೀಡಿಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಟೋ ಚಾಲಕ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಪಲ್ಟಿಯಾಗಿ ಗುರುವಾರ ಮೂರು ಜನ ಮೈಸೂರಿನ ಜೆಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಕೂಡಾ ಭೇಟಿ ಮಾಡಿ ಸಾಂತ್ವಾನ ಹೇಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದಾನೆ ಎಂದರು.
ಸರಗೂರು ತಾಲೂಕಿನ ಭಾಗದಲ್ಲಿ ಹೆಚ್ಚು ಕೂಲಿ ಕಾರ್ಮಿಕರು ಬೇರೆ ಬೇರೆ ಜಿಲ್ಲೆಗಳಿಗೆ ಹಾಗೂ ಗ್ರಾಮಗಳಿಗೆ ಶುಂಠಿ ಕೆಲಸಕ್ಕೆ ಬರುತ್ತಿದ್ದು, ತಾಲೂಕಿನ ರಸ್ತೆಗಳು ಕಿರಿದಾಗಿದ್ದು, ಇದರಿಂದಾಗಿ ಇಂತಹ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ವಾಹನಗಳನ್ನು ತಪಾಸಣೆ ಮಾಡಿ ಡ್ರೈವರ್ ಬಳಿ ವಾಹನದ ದಾಖಲೆ ಇದ್ದವ ಇಲ್ಲವೋ ಎಂದು ಚೆಕ್ ಮಾಡಿ ಇಲ್ಲದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಗೂಡ್ಸ್ ಡ್ರೈವರ್ ಗಳು ಬೆಳ್ಳಗಿನ ಸಮಯದಲ್ಲಿ ಮದ್ಯಪಾನ ಮಾಡಿ ವಾಹನವನ್ನು ಸಂಚಾರ ಮಾಡುತ್ತಿದ್ದಾರೆ ಎಂದು ಕೇಳಿ ಬರುತ್ತಿದೆ. ಅಂತವರ ಮೇಲೆ ದೂರು ದಾಖಲು ಮಾಡಿಕೊಂಡು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಸುಧೀರ್ ಗೌಡ, ಜೆಡಿಎಸ್ ಪಕ್ಷದ ಯುವ ಮುಖಂಡರು ಬೆಟ್ಟನಾಯಕ, ಸಾಗರೆ ಶಂಕರ್, ಅಗತ್ತೂರು ಮಹದೇವನಾಯಕ, ವೈಕುಂಠನಾಯಕ, ತಿಮ್ಮ ನಾಯಕ, ವಿಜಯ್, ಸಿ.ಟಿ.ನಾಯಕ, ನಿಂಗಪ್ಪ, ರವಿ, ಕೃಷ್ಣ, ಲೇಖನ, ನರಸಿಂಹರಾಜು, ಚರಣ್, ವಕೀಲ ಪ್ರಶಾಂತ್, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC