ಬೆಳಗಾವಿ: ಗೂಡ್ಸ್ ರೈಲು ಹಳಿ ತಪ್ಪಿದ ಘಟನೆ ಬೆಳಗಾವಿ ರೈಲ್ವೆ ನಿಲ್ದಾಣದಿಂದ ಅರ್ಧ ಕಿಲೋ ಮೀಟರ್ ದೂರದಲ್ಲಿ ನಡೆದಿದೆ.
ಅಪಘಾತ ಸಂಭವಿಸಿದ ಕೆಲವೇ ನಿಮಿಷಗಳಲ್ಲಿ ಅದೇ ಮಾರ್ಗವಾಗಿ ರಾಣಿ ಚೆನ್ನಮ್ಮ ರೈಲು ಸಂಚರಿಸುವುದರಲ್ಲಿತ್ತು. ಅಧಿಕಾರಿಗಳ ಸಮಯಪ್ರಜ್ಞೆಯಿಂದ ರಾಣಿ ಚೆನ್ನಮ್ಮ ರೈಲು ನಿಲುಗಡೆಗೊಳಿಸಲಾಯಿತು. ಇದರಿಂದಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಗೂಡ್ಸ್ ರೈಲು ಎರಡು ಗಂಟೆಗಳ ಕಾಲ ವಿಳಂಬವಾಗಿ ಚಲಿಸುತ್ತಿತ್ತು. ಹೀಗಾಗಿ, ಅದಾದ ಬೆನ್ನಲ್ಲೇ ರಾಣಿ ಚೆನ್ನಮ್ಮ ರೈಲು ಆಗಮಿಸುತ್ತಿತ್ತು. ಬೆಳಗ್ಗೆ 8 ಗಂಟೆಗೆ ರಾಣಿ ಚೆನ್ನಮ್ಮ ಸಂಚರಿಸಬೇಕಿತ್ತು. ರೈಲು ಬರುತ್ತಿದ್ದಂತೆಯೇ ಎಚ್ಚೆತ್ತ ಅಧಿಕಾರಿಗಳು, ರೈಲನ್ನು ಬೆಳಗಾವಿಯಿಂದ 8 ಕಿ.ಮೀ. ದೂರದಲ್ಲಿರುವ ದೇಸೂರ ನಿಲ್ದಾಣದಲ್ಲಿ ನಿಲುಗಡೆ ಮಾಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————