ಗೋವಾ ಪೊಲೀಸರು ಗೂಡ್ಸ್ ವಾಹನಗಳು ರಾಜ್ಯಕ್ಕೆ ಪ್ರವೇಶಿಸಿದಂತೆ ಕರ್ನಾಟಕ-ಗೋವಾ ಗಡಿಯಲ್ಲಿ ತಡೆಯುತ್ತಿದ್ದಾರೆ. ಹೀಗಾಗಿ ಕರ್ನಾಟಕ-ಗೋವಾ ಗಡಿಯಲ್ಲಿ ಲಾರಿಗಳು ಸಾಲುಗಟ್ಟಿ ನಿಂತಿವೆ.
ಖಾನಾಪುರ ತಾಲೂಕಿನ ಕಣಕುಂಬಿ ಗ್ರಾಮ ಮತ್ತು ಗೋವಾದ ಚೋರ್ಲಾ ಬಳಿ ಲಾರಿಗಳು ನಿಂತಿವೆ. ಚೋರ್ಲಾ ಘಾಟ್ನಲ್ಲಿ ಗೂಡ್ಸ್ ಲಾರಿ ಪ್ರವೇಶಕ್ಕೆ ನಿಷೇಧ ವಿಧಿಸಿದ್ದಕ್ಕೆ ಗೋವಾ ಪೊಲೀಸರ ವಿರುದ್ಧ ಲಾರಿ ಮಾಲಿಕರು ತೀರ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೆಪ್ಟೆಂಬರ್ 21ರಂದು ಅಧಿಸೂಚನೆ ಹೊರಡಿಸಿರುವ ಗೋವಾ ಉತ್ತರ ಜಿಲ್ಲಾಧಿಕಾರಿ, ಚೋರ್ಲಾ ಘಾಟ್ ಮೂಲಕ ಗೋವಾ ಪ್ರವೇಶಿಸಲು ಭಾರೀ ಲಾರಿಗಳಿಗೆ 2023ರ ಮಾರ್ಚ್ 19ರವರೆಗೆ ಸಂಚಾರ ನಿಷೇಧಿಸಿದ್ದಾರೆ.
ಗೋವಾಗೆ ಸಂಪರ್ಕ ಕಲ್ಪಿಸುವ ರಾಮನಗರ ಗೋವಾ ರಸ್ತೆ ಕಳೆದ ಮೂರು ವರ್ಷಗಳಿಂದ ಬಂದ್ ಆಗಿದೆ. ಹೀಗಾಗಿ ಗೋವಾ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಚೋರ್ಲಾ ಘಾಟ್ ಮೂಲಕ ಗೂಡ್ಸ್ ವಾಹನಗಳು ತೆರಳುತ್ತವೆ.
ಇದರಿಂದ ಕೇರಿ-ಬೆಳಗಾವಿ ರಾಜ್ಯ ಹೆದ್ದಾರಿ 01ರಲ್ಲಿ ಭಾರಿ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದೆ. ಪರಿಣಾಮ, ಉತ್ತರ ಗೋವಾ ಟ್ರಾಫಿಕ್ ಎಸ್‌ಪಿ ಮನವಿ ಮೇರೆಗೆ ಉತ್ತರ ಗೋವಾದ ಡಿಸಿ ಮಮು ಹಗೆ ಸಂಚಾರ ನಿರ್ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy