ಅನಂತಪುರ: ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋಗೆ ಸರ್ಕಾರಿ ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗಾರ್ಲ್ದಿನ್ನೆ ಮಂಡಲದ ತಲಗಸ್ಪಲ್ಲಿ ಬಳಿ ಇಂದು ಬೆಳಗ್ಗೆ ನಡೆದಿದೆ.
ಕುತ್ಲೂರು ಮಂಡಲದ ನೆಲ್ಲುಟ್ಲ ಗ್ರಾಮದ 12 ಕೃಷಿ ಕಾರ್ಮಿಕರು ಗಾರ್ಲ್ದಿನ್ನೆ ಬಳಿ ಗದ್ದೆಯಲ್ಲಿ ಕೆಲಸ ಮಾಡಿ ಆಟೋದಲ್ಲಿ ಹಿಂತಿರುಗುವಾಗ ಎದುರುಗಡೆಯಿಂದ ಬಂದ ಎಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಮೃತರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರ ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ, ಉಳಿದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆನೀಡುವ ವೇಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ ಗಾಯಾಳುಗಳಿಗೆ ಅನಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296