ಬೆಂಗಳೂರು: ಆರ್ ಸಿಬಿ (RCB) ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಆರೋಪಿಸಿದೆ ಎಂದು ವರದಿಯಾಗಿದೆ.
ಕರ್ನಾಟಕ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ಎಫ್ ಐಆರ್ ದಾಖಲಿಸಲಾಗಿದೆ ಎಂದು ರಿಟ್ ಅರ್ಜಿಯಲ್ಲಿ ಕೆಎಸ್ ಸಿಎ ಉಲ್ಲೇಖಿಸಿದೆ.
ಘಟನೆಯ ಹೊಣೆಯನ್ನು ಕೆಎಸ್ ಸಿಎ ಮೇಲೆ ಹೊರಿಸಲು ಯತ್ನಿಸಲಾಗುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜನದಟ್ಟಣೆ ನಿರ್ವಹಣೆ ಆರ್ ಸಿಬಿ ಹಾಗೂ ಪೊಲೀಸರ ಕರ್ತವ್ಯ. ಕರ್ನಾಟಕದ ಕ್ರಿಕೆಟ್ ನಿಯಂತ್ರಣವಷ್ಟೇ ಕೆಎಸ್ ಸಿಎ ಜವಾಬ್ದಾರಿ ಎಂದು ಸಂಸ್ಥೆ ಹೇಳಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW