ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆಗೆ ರಜಾ ದಿನ ಹೊರತುಪಡಿಸಿ, ಪ್ರಸ್ತುತ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ನೀಡಲಾಗುತ್ತಿದೆ. ವಾರದ 6 ದಿನವೂ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ. 6 ದಿನ ನೀಡುವುದರಿಂದ ವಾರ್ಷಿಕ 1,400 ಕೋಟಿ ರೂ. ವೆಚ್ಚವಾಗಲಿದೆ.
ಸರ್ಕಾರಿ ಶಾಲೆಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಂತ, ಹಂತವಾಗಿ ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಈ ಮೊದಲು ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ವಾರಕ್ಕೊಮ್ಮೆ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ಇದೀಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅದನ್ನು 10ನೇ ತರಗತಿಯವರೆಗೆ ವಿಸ್ತರಿಸಿದೆ. ವಾರದಲ್ಲಿ ಒಂದು ದಿನದ ಬದಲು ಎರಡು ದಿನಕ್ಕೆ ಹೆಚ್ಚಿಸಲಾಗಿತ್ತು. ಇನ್ನು ವಾರವಿಡೀ ವಿತರಿಸಲಾಗುವುದು ಎಂದು ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


