nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026

    ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

    September 3, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ
    • ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು
    • ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
    • ಗ್ರಾಮೀಣ ಭಾಗದ ಜನರಿಗೆ ಸ್ವಾವಲಂಬಿ ಬದುಕು ಕಟ್ಟುಕೊಳ್ಳಿ: ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಕರೆ
    • ಜಾನಸನ್ ಘೋಡೆ ಅವರಿಗೆ ಶ್ರೀಶೈಲಂ ಅಕ್ಕಮಹಾದೇವಿ ಚೈತನ್ಯ ಪೀಠದಲ್ಲಿ ಸನ್ಮಾನ
    • ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
    • ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ
    • ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ನೌಕರರು ಕೆಲಸದ ಒತ್ತಡದಲ್ಲಿ ಆರೋಗ್ಯವನ್ನು ಕಡೆಗಣಿಸಬಾರದು: ಟಿ.ಬಿ.ಜಯಚಂದ್ರ
    ತುಮಕೂರು April 9, 2025

    ಸರ್ಕಾರಿ ನೌಕರರು ಕೆಲಸದ ಒತ್ತಡದಲ್ಲಿ ಆರೋಗ್ಯವನ್ನು ಕಡೆಗಣಿಸಬಾರದು: ಟಿ.ಬಿ.ಜಯಚಂದ್ರ

    By adminApril 9, 2025No Comments2 Mins Read
    t b jayachandra

    ತುಮಕೂರು:  ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ ಎಂದು ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರು ಅಭಿಪ್ರಾಯಪಟ್ಟರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2024–25ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೈಹಿಕ ಮತ್ತು ಮಾನಸಿಕ ಆರೋಗ್ಯಗಳೆರಡೂ ಪರಸ್ಪರ ಒಂದಕ್ಕೊಂದು ಸಂಬಂಧ ಹೊಂದಿರುವುದರಿಂದ ಇವೆರಡರ ಸಮತೋಲನವನ್ನು ಕಾಪಾಡಿಕೊಳ್ಳುವುದು ಅನಿವಾರ್ಯ ಎಂದು ತಿಳಿಸಿದರು.

    ಸರ್ಕಾರಿ ನೌಕರರು ಕಚೇರಿ ಕೆಲಸದ ಒತ್ತಡದಲ್ಲಿ ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಡೆಗಣಿಸಬಾರದು. ಕರ್ತವ್ಯದೊಂದಿಗೆ ನಿಯಮಿತ ಧ್ಯಾನ, ವ್ಯಾಯಾಮ ಮತ್ತು ಉತ್ತಮ ಪೌಷ್ಟಿಕ ಆಹಾರ ಸೇವನೆಯನ್ನು ರೂಢಿಸಿಕೊಳ್ಳುವುದರಿಂದ ಮನಸ್ಸು ಮತ್ತು ದೇಹದ ಆರೋಗ್ಯವನ್ನು ಸಮತೋಲನದಲ್ಲಿಟ್ಟುಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು.

    ಸರ್ಕಾರಿ ನೌಕರರು ಪ್ರಾಮಾಣಿಕ ಸೇವೆ ಸಲ್ಲಿಸಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು. ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ಕರೆ ನೀಡಿದರು.

    ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಮಾತನಾಡಿ, ಸರ್ಕಾರಿ ನೌಕರರು ಅನಾವಶ್ಯಕವಾಗಿ ಸಾಮಾಜಿಕ ಜಾಲತಾಣಗಳನ್ನು ವೀಕ್ಷಿಸಿ ಸಮಯ ವ್ಯರ್ಥ ಮಾಡದೆ, ಶಾರೀರಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ರಾಜ್ಯದಲ್ಲಿ ಸುಮಾರು 2.50 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಐದಾರು ಮಂದಿ ಮಾಡುವ ಕೆಲಸ ಒಬ್ಬರೇ ಮಾಡುವ ಒತ್ತಡದ ಪರಿಸ್ಥಿತಿಯಿದೆ. ಒತ್ತಡದಿಂದ ಹೊರಬರಲು ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ನಿಯಮಿತವಾಗಿ ನಡಿಗೆ ಅಭ್ಯಾಸ ಮಾಡುವ ದೃಢ ಸಂಕಲ್ಪ ಮಾಡಬೇಕು. ಪ್ರೋಟೀನ್ ಹಾಗೂ ಪೌಷ್ಟಿಕಾಂಶವುಳ್ಳ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಇದರಿಂದ ಕೆಲಸ ಮಾಡಲು ನವ ಚೈತನ್ಯ ದೊರೆಯುತ್ತದೆ ಎಂದು ಸಲಹೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ನೌಕರರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ಉತ್ತಮ ಸೇವೆ ಸಲ್ಲಿಸಲು ಸಾಧ್ಯ. ಕ್ರೀಡೆಯಿಂದ ಕೂಡಿದ ಜೀವನ ಆರೋಗ್ಯಯುತವಾಗಿರುತ್ತದೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಾಳಜಿ ಹೊಂದಿರಬೇಕೆಂದು ತಿಳಿಸಿದರು.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಮಹಿಳಾ ನೌಕರರು ಮನೆ ಹಾಗೂ ಕಚೇರಿ ಕೆಲಸಗಳೆರಡನ್ನೂ ನಿಭಾಯಿಸಬೇಕು. ಮನೆ ಹಾಗೂ ಕಚೇರಿ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಲು ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹುಮುಖ್ಯ. ಪ್ರತಿಯೊಬ್ಬರಿಗೂ ತಾವು ಸೇವಿಸುವ ಆಹಾರದ ಬಗ್ಗೆ ಅರಿವು ಇರಬೇಕು ಎಂದರಲ್ಲದೆ, ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ತಮ್ಮ ಗುರಿಯನ್ನು ಮುಟ್ಟುವ ಮನೋಭಾವ ಹೊಂದಿರಬೇಕು ಎಂದು ಹೇಳಿದರು.

    ಮನುಷ್ಯನು ಗರ್ಭಧರಿಸುವ ಶಿಶುವಿನಿಂದ ಹಿಡಿದು ಮರಣದವರೆಗೂ ಒಂದಲ್ಲಾ ಒಂದು ರೀತಿಯಲ್ಲಿ ಸರ್ಕಾರಿ ಸೇವೆಗೊಳಪಡುತ್ತಾನೆ. ಗರ್ಭಾವಸ್ಥೆಯಲ್ಲಿ ಆಶಾ ಕಾರ್ಯಕರ್ತೆಯರ ಸೇವೆ, ಬಾಲ್ಯಾವಸ್ಥೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ, ಶಿಕ್ಷಕರಿಂದ ಉತ್ತಮ ಶಿಕ್ಷಣ, ಆರೋಗ್ಯ ಇಲಾಖೆಯ ಮೂಲಕ ಆರೋಗ್ಯಪೂರ್ಣ ಜೀವನ, ಗ್ರಾಮ ಹಾಗೂ ನಗರ ಆಡಳಿತದಿಂದ ಮೂಲ ಸೌಕರ್ಯಗಳನ್ನು ಜನರಿಗೆ ಒದಗಿಸುವಲ್ಲಿ ಪ್ರತಿಯೊಬ್ಬ ಸರ್ಕಾರಿ ನೌಕರನು ನಿರ್ಧಾರಕ ಪಾತ್ರವಹಿಸುತ್ತಾನೆ. ಜನಸಾಮಾನ್ಯರಿಗೆ ಹಂತ–ಹಂತವಾಗಿ ಸರ್ಕಾರದ ಹಲವಾರು ಸೇವೆಗಳನ್ನು ತಲುಪಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಸರ್ಕಾರಿ ನೌಕರರಿಗೆ ಅಭಿನಂದನೆ ತಿಳಿಸುತ್ತಾ ಮೆಚ್ಚುಗೆ ಮಾತುಗಳನ್ನಾಡಿದರು.

    ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಮಾತನಾಡಿ, ದೇಹ ಮತ್ತು ಮನಸ್ಸು ಚಟುವಟಿಕೆಯಿಂದಿರಲು ವೃತ್ತಿಯೊಂದಿಗೆ ಕ್ರೀಡಾ ಪ್ರವೃತ್ತಿಯನ್ನೂ ಬೆಳೆಸಿಕೊಳ್ಳಬೇಕು. ಮನಸ್ಸಿನ ಮಾತು ದೇಹ ಕೇಳುವಂತಿರಬೇಕು. ಇಲ್ಲದಿದ್ದರೆ ದೇಹ ಜಡತ್ವ ಹೊಂದುತ್ತದೆ. ಈ ನಿಟ್ಟಿನಲ್ಲಿ ಮನಸ್ಸು ಮತ್ತು ದೇಹದ ಉತ್ಸಾಹಕ್ಕಾಗಿ ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರಾಜೇಶ್ವರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎನ್. ನರಸಿಂಹರಾಜು, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಂಗಪ್ಪ, ಡಯಟ್ ಪ್ರಾಂಶುಪಾಲ ಕೆ. ಮಂಜುನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಟಿ.ಆರ್. ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್

    September 3, 2026

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಹೊಳೆನರಸೀಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ಬೆಂಗಳೂರು) ಇದರ ವತಿಯಿಂದ ಹೊಳೆನರಸೀಪುರ ತಾಲ್ಲೂಕು ಪ್ರಾಥಮಿಕ ಶಾಲಾ ಸಂಘಕ್ಕೆ…

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026

    ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

    September 3, 2026

    ಗ್ರಾಮೀಣ ಭಾಗದ ಜನರಿಗೆ ಸ್ವಾವಲಂಬಿ ಬದುಕು ಕಟ್ಟುಕೊಳ್ಳಿ: ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಕರೆ

    September 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.