ಹುಬ್ಬಳ್ಳಿ: ನೇಹಾ ತಂದೆ ನಿರಂಜನ ಹಿರೇಮಠ ಅವರಿಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆಯನ್ನು ರಾಜ್ಯ ಸರ್ಕಾರ ಕಲ್ಪಿಸಿದೆ.
ನೇಹಾ ಹಿರೇಮಠ ಹತ್ಯೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನೇಹಾ ತಂದೆ ನಿರಂಜನ್ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿ, ಜೀವಬೆದರಿಕೆ ಇದ್ದರೆ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ನೇಹಾ ತಂದೆಗೆ ಭದ್ರತೆ ವ್ಯವಸ್ಥೆ ಮಾಡಲಾಗಿದೆ.
ಮಗಳ ಹತ್ಯೆ ನಂತರ ಅನೇಕರು ಬಂದು ಸಾಂತ್ವನ ಹೇಳಿ, ಧೈರ್ಯ ತುಂಬುತ್ತಿದ್ದಾರೆ. ಆದರೆ ಸಂತಾಪದ ನೆಪದಲ್ಲಿ ಒಬ್ಬರು ನಮ್ಮ ಮನೆಗೆ ಬಂದು ವಿಡಿಯೋ ಮಾಡಿಕೊಂಡು ಹೋಗಿದ್ದಾರೆ. ಕೆಲವೊಂದು ಅನುಮಾನಾಸ್ಪದ ಸನ್ನಿವೇಶ ಕಂಡುಬಂದಿದೆ. ಈ ವಿಷಯನ್ನು ಪೊಲೀಸ್ ಆಯುಕ್ತರಿಗೆ ಹೇಳಿದ್ದೇವೆ. ಅವರು ಭದ್ರತೆ ಕೊಡುವುದಾಗಿ ಹೇಳಿದ್ದು ಪೊಲೀಸರನ್ನು ನಿಯೋಜಿಸಿದ್ದಾರೆಂದು ನಿರಂಜನ್ ತಿಳಿಸಿದ್ದರು. ಇದರ ಬೆನ್ನಲ್ಲೇ ಅವರಿಗೆ ಭದ್ರತೆ ವ್ಯವಸ್ಥೆ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296