nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ
    ತುಮಕೂರು June 8, 2026

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    By adminJune 8, 2026No Comments2 Mins Read
    g parameshwar

    ತುಮಕೂರು: ಸಮಾಜದ ಎಲ್ಲ ವರ್ಗಗಳೂ ಸಮಾನವಾಗಿ ಬದುಕಬೇಕು, ಉತ್ತಮ ಜೀವನ ರೂಪಿಸಿಕೊಳ್ಳಲೆಂಬ ಉದ್ದೇಶದಿಂದ ಬಡತನ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಬಡವರ ಪರವಾಗಿ ಕೆಲಸ ಮಾಡಿಕೊಡುವುದು ನಮ್ಮ ಕರ್ತವ್ಯ ಕೂಡ ಎಂದು ಎಂದು ಉಪ ಮುಖ್ಯಮಂತ್ರಿ, ಡಾ.ಜಿ.ಪರಮೇಶ್ವರ ತಿಳಿಸಿದರು.

    ಜಿಲ್ಲಾಡಳಿತ, ತುಮಕೂರು ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಾಭಿವೃದ್ಧಿ ಕೋಶದ ವತಿಯಿಂದ ಭಾನುವಾರ ಟೌನ್‌ಹಾಲ್ ವೃತ್ತದ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗ ತುಮಕೂರು ಜಿಲ್ಲೆ ವಿವಿಧೆಡೆ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ವಸತಿರಹಿತ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು.

    ಪ್ರಸ್ತುತ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೇತೃತ್ವದ ಸರ್ಕಾರ ಬಂದಿದೆ. ಈ ಸರ್ಕಾರದ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿ, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವುದಾಗಿದೆ ಎಂದರು.

    ಕರ್ನಾಟಕ ಇಡೀ ದೇಶದಲ್ಲೇ 25 ವರ್ಷಗಳಿಗೂ ಮುಂದಿರುವುದನ್ನು ತಾವು ಕಾಣಬಹುದು. ಬೇರೆ ರಾಜ್ಯಗಳನ್ನು ಗಮನಿಸಿದಾಗ ನಮ್ಮದು ಶ್ರೇಯಸ್ಕರ ಸ್ಥಿತಿಯಲ್ಲಿರುವುದನ್ನು ಗಮನಿಸಬಹುದು. ರಾಜ್ಯದಲ್ಲಿ ಶಾಂತಿ, ಅಭಿವೃದ್ಧಿ ಹಾಗೂ ಯುವಕರಿಗೆ ಉದ್ಯೋಗಾವಕಾಶ ಇದು ಉಳಿದ ಎರಡು ವರ್ಷಗಳಲ್ಲಿ ನಮ್ಮ ಆದ್ಯತೆ ಎಂದರು.

    209 ಹಕ್ಕುಪತ್ರ: ಸಮಾಜದ ಎಲ್ಲ ಜನರ ರೀತಿ ಅಲೆಮಾರಿ ಸಮುದಾಯದ ಕುಟುಂಬವೂ ಮುಖ್ಯವಾಹಿನಿಗೆ ಬರಬೇಕೆಂಬ ಉದ್ದೇಶದಿಂದ ಅಲೆಮಾರಿ ಸಮುದಾಯದ ಕುಟುಂಬಗಳಿಗೆ 209 ಹಕ್ಕುಪತ್ರಗಳನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅವರಿಗೆ ರಾಜೀವ್‌ ಗಾಂಧಿ ವಸತಿ ಯೋಜನೆ ಮೂಲಕ ಮನೆಗಳನ್ನು ಕಟ್ಟಿಸಿಕೊಡಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

    ಅಲೆಮಾರಿ ಸಮುದಾಯ ತಮ್ಮ ಮಕ್ಕಳನ್ನು ಉತ್ತಮ ವಿದ್ಯಾವಂತರನ್ನಾಗಿ ಮಾಡುವ ಮೂಲಕ ಮುಖ್ಯವಾಹಿನಿಗೆ ತರಬೇಕು ಎಂದ ಅವರು, ಇಂತಹ ಕೆಲಸಗಳಿಗೆ ಸರ್ಕಾರ ಹೊಸ ರೂಪ ಕೊಟ್ಟಿದೆ ಎಂದರು.

    ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ನಿಕೇತ್ ರಾಜ್ ಎಂ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಆಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತ ಶುಭ, ಜಿ.ಪಂ.ಉಪ ಕಾರ್ಯದರ್ಶಿ ಸಂಜೀವಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಸೋನಿಯಾ ವರ್ಣೇಕರ್, ಉಪಸ್ಥಿತರಿದ್ದರು.

    ಶಾಸಕ ಸುರೇಶ್‌ಗೌಡ ಅವರು ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಉತ್ತಮ ಜನಪರ ಕಾರ್ಯಗಳನ್ನು ಮಾಡಿದೆ. ತುಮಕೂರು ಜಿಲ್ಲೆಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಪ್ರಶಂಸನೀಯ. ಅಂತೆಯೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಹೆಜ್ಜೆ ಗುರುತುಗಳು ಇರುವಂತೆ ಕೆಲಸಗಳು ಅವರಿಂದ ಆಗಬೇಕು ಎಂದು ಆಶಿಸಿದರು. ಶಾಸಕ ಜ್ಯೋತಿಗಣೇಶ್ ಅವರು, ತುಮಕೂರು ನಗರ ಭಾಗದ ಕೊಳಗೇರಿ ಪ್ರದೇಶದ ಜನರಿಗೂ ಹಕ್ಕುಪತ್ರಗಳನ್ನು ನೀಡುವಂತಾಗಬೇಕು ಎಂದು ಆಶಿಸಿದರು.

    ತುಮಕೂರು ಮಹಾನಗರ ಪಾಲಿಕೆಯ ಈ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ತಮ್ಮ ಸ್ವಂತ ಖರ್ಚಿನಿಂದ ನಿರ್ಮಿಸಲಾಗಿದೆ. ಅಂತೆಯೇ ಇಂದು ಕಾಂಪೌಂಡ್ ಗೋಡೆಗೆ ಶಿಲಾನ್ಯಾಸ ಮಾಡಲಾದ ಡಾ.ಬಾಬು ಜಗಜೀವನರಾಮ್ ಭವನದ ಮುಂಭಾಗ ತಮ್ಮ ಸ್ವಂತ ಖರ್ಚಿನಿಂದ ಜಗಜೀವನರಾಮ್ ಪ್ರತಿಮೆ ನಿರ್ಮಿಸಲಾಗುವುದು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಔರಾದ್: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಸ್ವಚ್ಛ ಹಾಗೂ ಸುಸ್ಥಿರ ಸಮಾಜ ನಿರ್ಮಾಣಕ್ಕಾಗಿ ಏಕಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ…

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.