ಬೆಂಗಳೂರು: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇತಗಾನಹಳ್ಳಿ ಬಳಿಯ ಸರ್ಕಾರದ ಜಮೀನು ಒತ್ತುವರಿ ಮಾಡಿರುವ ಆರೋಪದ ಹಿನ್ನೆಲೆ ಹೈಕೋರ್ಟ್ ಸೂಚನೆಯಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.
ಕಂದಾಯ ಸಚಿವ ಕೃಷ್ಣ ಬೇರೈಗೌಡ ಈ ಬಗ್ಗೆ ಮಾತನಾಡಿ, ಹೈಕೋರ್ಟ್ ಸೂಚನೆಯಂತೆ ತನಿಖೆಗೆ ನಡೆಸಲು ಉನ್ನತ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಹೈಕೋರ್ಟ್ ಸೂಚನೆಗಳ ಪಾಲಿಸುವಂತೆ ಸೂಚಿಸಲಾಗಿದೆ. ಹೈಕೋರ್ಟ್ ಸೂಚನೆ ನೀಡಿದಾಗ ಸರ್ಕಾರ ಅದನ್ನು ಗೌರವಿಸಬೇಕಾಗುತ್ತದೆ. ಹೈಕೋರ್ಟ್ ನೀಡಿದ ಸಮಯದೊಳಗೆ ಎಸ್ ಐಟಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಹೇಳಿದರು.
ಕೇತಗಾನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 8, 9, 10, 16 ಮತ್ತು 79 ರಲ್ಲಿ 14.04 ಎಕರೆ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಲಾಗಿದೆ ಎಂಬ ಕುಮಾರಸ್ವಾಮಿ ಅವರ ವಿರುದ್ಧ ಕೇಳಿ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4