ತುಮಕೂರು: ಕೇವಲ ಒಬ್ಬ ವಿದ್ಯಾರ್ಥಿನಿಗೆ ಸರಕಾರಿ ಪ್ರಾಥಮಿಕ ಶಾಲೆಯೊಂದು ನಡೆಯುತ್ತಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದ್ದೇವಳ್ಳಿ ಗ್ರಾಮದಲ್ಲಿದೆ.
ಗ್ರಾಮದಲ್ಲಿರುವ ಈ ಸರಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಶೈಕ್ಷಣಿಕ ಸೌಲಭ್ಯವಿದೆ. ಸರಕಾರಿ ಪ್ರಾಥಮಿಕ ಬಿಸಿಯೂಟ, ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲಾ ರೀತಿ ಸೌಲಭ್ಯಗಳಿವೆ. ಇಲ್ಲಿ ಒಂದನೇ ತರಗತಿಯಲ್ಲಿ ಒಬ್ಬ ವಿದ್ಯಾರ್ಥಿನಿ ಮಾತ್ರ 2024–25ನೇ ಸಾಲಿಗೆ ದಾಖಲಾಗಿದ್ದಾಳೆ. ಅಲ್ಲದೆ 5ನೇ ತರಗತಿಯವರೆಗೆ ಯಾವುದೇ ವಿದ್ಯಾರ್ಥಿಗಳು ದಾಖಲಾತಿ ಆಗಿಲ್ಲ. ಒಬ್ಬ ವಿದ್ಯಾಥಿಗೆ ಶಾಲೆ ನಡೆಯುತ್ತಿದೆ.
ಕೊರೊನಾ ಸಮಯದಲ್ಲಿ ಶಾಲೆಯಲ್ಲಿ 10 ಮಕ್ಕಳು ವ್ಯಾಸಂಗ ಮಾಡುತ್ತಿದ್ದರು. ನಂತರದ ದಿನಗಳಲ್ಲಿ ದಾಖಲಾತಿ ಹೆಚ್ಚಿಸಬೇಕೇಂಬ ಅಭಿಲಾಶೆ ಶಿಕ್ಷಕಿ ಪದ್ಮ ಅವರದ್ದಾಗಿತ್ತು. ಆದ್ರೆ ಕೊರೊನಾ ಸಂದರ್ಭದಲ್ಲಿ ಖಾಸಗಿ ಶಾಲೆಯಿಂದ ಬಂದಿದ್ದ ಮಕ್ಕಳು ಕೊರೊನ ಇಳಿಮುಖವಾದ ನಂತರ ವಾಪಸ್ ಖಾಸಗಿ ಶಾಲೆಗೆ ದಾಖಲಾಗಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಯಾವ್ದೆ ದಾಖಲಾತಿ ಇಲ್ಲದ್ದಾಗಿದೆ.
ಕಳೆದ ಎರಡು ವಷದಿಂದ ಮೂವರು ವಿದ್ಯಾರ್ಥಿಗಳು ಇಲ್ಲಿ ದಾಖಲಾತಿ ಆಗಿದ್ದರು.. ಆದ್ರೆ ಈ ವರ್ಷ ಕೇವಲ ಒಬ್ಬ ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದಾರೆ. ದಾಖಲಾತಿ ಹೆಚ್ಚಿಸಲು ಸಾಕಷ್ಟು ಪ್ರಯತ್ನ ಪಟ್ಟರೂ ಸಾಧ್ಯವಾಗಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4