ತುರುವೇಕೆರೆ: ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿ ತಲುಪಿರುವುದು ವಿಷಾದನೀಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
ಪಟ್ಟಣದ ಜಿಜೆಸಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳೆಂದರೆ ಜನರಿಗೆ ತಾತ್ಸಾರ ಮನೋಭಾವ ಮೂಡಿದೆ. ಸರ್ಕಾರಿ ಶಾಲೆಗಳಲ್ಲಿ ಹಲವು ಸವಲತ್ತುಗಳಿವೆ. ನುರಿತ ಮತ್ತು ವಿದ್ಯಾವಂತ ಶಿಕ್ಷಕರು ಇದ್ದಾರೆ. ಆದರೂ ಜನರಿಗೆ ಸರ್ಕಾರಿ ಶಾಲೆಗಳು ಬೇಡವಾಗಿದೆ. ಇದಕ್ಕೆ ಕಾರಣವೇನು ಎನ್ನುವುದನ್ನು ಅರಿಯಬೇಕು. ಉದಾಸೀನತೆಗೆ ಇರುವ ಕಾರಣವನ್ನು ಹುಡುಕಲು ಪೋಷಕರು, ಶಿಕ್ಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.
ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅನಂತರಾಮು, ಬಿ.ಆರ್.ಸಿ.ಸುರೇಶ್, ಉಪ ಪ್ರಾಂಶುಪಾಲ ವೆಂಕಟೇಶ್, ಶಿಕ್ಷಣ ಇಲಾಖೆ ಅಧಿಕಾರಿಗಳಾದ ನಳಿನಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸವಿತಾ, ಬಿ.ಆರ್.ಪಿ ಕೆ.ಆರ್.ಸುರೇಶ್, ಎಸ್‌ಡಿಎಂಸಿ ಅಧ್ಯಕ್ಷ ದೇವರಾಜು, ಮುನಿಯೂರು ರಂಗಸ್ವಾಮಿ, ನಂಜೇಗೌಡ, ಗುರುಮೂರ್ತಿ ಪಾಲ್ಗೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


