ತುಮಕೂರು: ರಾಜ್ಯ ಸರ್ಕಾರಿ ವಾಹನ ಚಾಲಕರ ಸಂಘದ ಸಭೆಯನ್ನು ಫೆಬ್ರವರಿ 2ರಂದು ಆಯೋಜಿಸಲಾಗಿದೆ. ಸಂಘದ ಚಟುವಟಿಕೆ, ಲೆಕ್ಕಪರಿಶೋಧನೆ ವರದಿ, ಗುರುತಿನ ಚೀಟಿ, ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಭೆಯಲ್ಲಿ ಖಾಲಿಯಿರುವ ಸಂಘದ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಲಾಗುವುದು. ಸಭೆಯು ಸಾರಥಿ ನಿಲಯ, ಕಾಲ್ಟೆಕ್ಸ್ ಸರ್ಕಲ್, ಕುಣಿಗಲ್ ರಸ್ತೆ, ತುಮಕೂರು ಇಲ್ಲಿ ಫೆ.2ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ತಾಲ್ಲೂಕು ಮಟ್ಟದ ಅಧ್ಯಕ್ಷರು/ಉಪಾಧ್ಯಕ್ಷರು/ಸದಸ್ಯರುಗಳು ಸಭೆಗೆ ಹಾಜರಾಗಲು ಸಂಘದ ಅಧ್ಯಕ್ಷ ಸಿ. ಜಯರಾಮ್ ಕೋರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx