nammatumakuru

    Subscribe to Updates

    Get the latest creative news from FooBar about art, design and business.

    What's Hot

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026
    Facebook Twitter Instagram
    ಟ್ರೆಂಡಿಂಗ್
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ July 21, 2026

    ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು

    By adminJuly 21, 2026No Comments2 Mins Read
    grihalakshmi.jpg

    ಸರಗೂರು: ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರಗಳನ್ನು ವಿತರಿಸುವುದು ಸರ್ಕಾರದ ಮುಖ್ಯ ಬದ್ಧತೆಯಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

    ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಂದಾಯ ಇಲಾಖೆಯ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

    “ಸಾಗುವಾಳಿ ಪತ್ರವು ಗ್ರಾಮೀಣ ಭಾಗದ ಬಡ ಹಾಗೂ ರೈತ ಕುಟುಂಬಗಳ ಬದುಕಿಗೆ ಶಕ್ತಿ ಮತ್ತು ಭದ್ರತೆಯನ್ನು ನೀಡುವ ಅತ್ಯಂತ ಮಹತ್ವದ ದಾಖಲೆಯಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಹಾಗೂ ಭೂಮಿಯ ಮೇಲಿನ ಹಕ್ಕನ್ನು ಕಾನೂನುಬದ್ಧವಾಗಿ ಸ್ಥಾಪಿಸಲು ಇದು ಸಹಕಾರಿಯಾಗಿದೆ,” ಎಂದು ಶಾಸಕರು ಹೇಳಿದರು.

    ಅರ್ಹರಿಗೆ ಪಾರದರ್ಶಕ ಹಾಗೂ ಶೀಘ್ರ ರೀತಿಯಲ್ಲಿ ಸಾಗುವಾಳಿ ಪತ್ರ ವಿತರಿಸಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಬಾಕಿ ಉಳಿದಿರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು ಎಂದು ಅವರು ನಿರ್ದೇಶನ ನೀಡಿದರು.

    ಜಾತಿ, ಆದಾಯ ಪ್ರಮಾಣಪತ್ರ ಹಾಗೂ ಆರ್ಟಿಸಿ ಪಡೆಯಲು ಸಾರ್ವಜನಿಕರು ಮತ್ತು ರೈತರು ತಮ್ಮ ಕೂಲಿ ಕೆಲಸ ಬಿಟ್ಟು ತಹಸೀಲ್ದಾರ್ ಕಚೇರಿಗೆ ಅಲೆಯುತ್ತಿರುವ ದೂರುಗಳು ಸಾರ್ವಜನಿಕರಿಂದ ಹಾಗೂ ಪಕ್ಷದ ಮುಖಂಡರಿಂದ ಬಂದಿವೆ. “ಜನರು ಕಚೇರಿಗೆ ಬಂದರೂ ಕೆಲಸ ಸರಿಯಾಗಿ ಆಗುತ್ತಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ. ಇನ್ಮುಂದೆ ಸಾರ್ವಜನಿಕರನ್ನು ಅಥವಾ ರೈತರನ್ನು ಕಚೇರಿಗೆ ಅಲೆದಾಡಿಸುವ ವಿಷಯ ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಎಚ್ಚರಿಸಿದರು.

    ಜೊತೆಗೆ, ಜಾತಿ ಪ್ರಮಾಣಪತ್ರ ವಿತರಣೆಯನ್ನು ಸುಲಭಗೊಳಿಸಲು ತಹಸೀಲ್ದಾರ್ ಕಚೇರಿಯಲ್ಲಿ ಮತ್ತೊಂದು ಕೌಂಟರ್ ತೆರೆಯುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ್ ಮೋಹನಕುಮಾರಿ, “ಸರ್ಕಾರದ ವಿವಿಧ ಸೌಲಭ್ಯಗಳು ಅರ್ಹರಿಗೆ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಸಾಗುವಾಳಿ ಪತ್ರವು ರೈತರ ಭೂಹಕ್ಕನ್ನು ಅಧಿಕೃತಗೊಳಿಸುವುದರ ಜೊತೆಗೆ ಬ್ಯಾಂಕ್ ಸಾಲ ಪಡೆಯಲು ಉಪಯುಕ್ತವಾಗಿದೆ. ಫಲಾನುಭವಿಗಳು ಅಗತ್ಯ ದಾಖಲೆಗಳನ್ನು ಸರಿಯಾಗಿ ಸಲ್ಲಿಸಿ ಇಲಾಖೆಗೆ ಸಹಕರಿಸಿದರೆ ವಿತರಣಾ ಪ್ರಕ್ರಿಯೆ ಇನ್ನಷ್ಟು ವೇಗಗೊಳ್ಳಲಿದೆ,” ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಸ್ವಾಮಿ, ಸದಸ್ಯ ಚೆಲುವ ಕೃಷ್ಣ, ಮಾಜಿ ಜಿ.ಪಂ. ಉಪಾಧ್ಯಕ್ಷೆ ಭಾಗ್ಯಲಕ್ಷ್ಮಿ, ಸುನೀಲ್ ಬೋಸ್ ಅಭಿಮಾನಿಗಳ ಬಳಗದ ಅಧ್ಯಕ್ಷ ದೇವಲಾಪುರ ಸಿದ್ದರಾಜು, ಗ್ಯಾರಂಟಿ ಸಮಿತಿ ಸದಸ್ಯ ಚಲುವರಾಜು, ಕಸಾಪ ಅಧ್ಯಕ್ಷ ಕೆಂಡಗ್ಗಣಸ್ವಾಮಿ, ನಾಗರಾಜು, ಪ್ರಭು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    Leave A Reply Cancel Reply

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ…

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.