ತುಮಕೂರು: ತಾಲ್ಲೂಕಿನ ಬೆಳ್ಳಾವಿ ಹೋಬಳಿಯ ಸೀಬಿ ಗ್ರಾಮದ ಪ್ರಸಿದ್ಧ ಐತಿಹಾಸಿಕ ಶ್ರೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ರಾಜ್ಯಪಾಲರಾದ ಸುಧಾ ಯಾದವ್ ಅವರು ಸೋಮವಾರ ಸಂಜೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ಸೀಬಿ ದೇವಸ್ಥಾನಕ್ಕೆ ಆಗಮಿಸಿದ ರಾಜ್ಯಪಾಲರು, ಶ್ರೀ ನರಸಿಂಹಸ್ವಾಮಿಗೆ ಪೂಜೆ ಸಲ್ಲಿಸಿ ದೇವಾಲಯದ ಆವರಣವನ್ನು ವೀಕ್ಷಿಸಿದರು. ಐತಿಹಾಸಿಕ ಹಾಗೂ ಧಾರ್ಮಿಕ ಹಿನ್ನೆಲೆ ಹೊಂದಿರುವ ಈ ದೇವಾಲಯವು ತನ್ನ ವಿಶಿಷ್ಟ ವಾಸ್ತುಶಿಲ್ಪ ಮತ್ತು ಕಲಾತ್ಮಕ ಕೆತ್ತನೆಗಳಿಂದ ಪ್ರಸಿದ್ಧಿ ಪಡೆದಿದೆ. ದೇವಾಲಯದ ವಿಶೇಷತೆಗಳನ್ನು ವೀಕ್ಷಿಸಿದ ರಾಜ್ಯಪಾಲರು, ದೇಗುಲದ ಮಹತ್ವವನ್ನು ತಿಳಿದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪ ವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
