ಪಾವಗಡ: ಪಟ್ಟಣದ ಎಸ್ ಎಸ್ ಕೆ ರಂಗಮಂದಿರದಲ್ಲಿ ಸೋಮವಾರ ಜೆಡಿಎಸ್ ಮತ್ತು ಬಿಜೆಪಿ ತಾಲ್ಲೂಕು ಘಟಕ ವತಿಯಿಂದ ಚಿತ್ರದುರ್ಗ ಸಂಸದ ಗೋವಿಂದ್ ಕಾರಜೋಳ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ನೀರಾವರಿ ಯೋಜನೆಗಳ ಕಾಮಗಾರಿ ವೇಗವಾಗಿ ಹೆಚ್ಚಿಸುವಂತೆ ಸಂಬಂಧಿಸಿದ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಅನುಕೂಲ ಮಾಡಿಕೊಡಲಾಗುವುದು ಎಂದರು.
ಮಹಾದಾಯಿ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆಗಳ ಸಮಗ್ರ ವರದಿ ನೀಡಲಾಗಿದೆ. ತಾಲ್ಲೂಕಿನಲ್ಲಿ ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುವುದು. ತಿಂಗಳಿಗೊಮ್ಮೆ ತಾಲ್ಲೂಕಿಗೆ ಆಗಮಿಸಿ ಒಂದು ದಿನ ಪೂರ್ತಿ ಜನತೆಯಿಂದ ಅಹವಾಲು ಸ್ವೀಕರಿಸಲಾಗುವುದು ಎಂದು ತಿಳಿಸಿದರು.
ಪಾವಗಡ ತಾಲ್ಲೂಕಿಗೆ ನೀರಾವರಿ ಅತ್ಯವಶ್ಯಕತೆ ವೆಂದು ರೈತರಿಗೆ ಅನುಕೂಲವಾಗುವ ರೀತಿ ನೀರಾವರಿ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಮಾತನಾಡಿ, ಹೆಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಈ ಭಾಗದಲ್ಲಿ ಕಾರ್ಖಾನೆಗಳ ಸ್ಥಾಪನೆಗೆ ಅನುಕೂಲವಾಗಲಿದೆ ಎಂದರು.
ಬಿಜೆಪಿ ರಾಜ್ಯ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಮಾತನಾಡಿ, ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ಅವರು ವಿವಿಧ ಸರ್ಕಾರಗಳಲ್ಲಿ ಸಚಿವರಾಗಿ ಕೆಲಸ ಮಾಡಿರುವ ಅನುಭವ ಇದೆ. ಹೀಗಾಗಿ ಈ ಭಾಗದ ಅಭಿವೃದ್ಧಿಯಾಗಲಿದೆ ಎಂದರು.
ಇದೇ ವೇಳೆ ಮಾತನಾಡಿದ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಅಂಜಿನಪ್ಪ, ಸ್ಥಳೀಯ ಶಾಸಕರು ಕ್ಷೇತ್ರದ ಅಭಿವೃದ್ಧಿಯನ್ನು ಮರೆತಂತಿದೆ. ಈಗಿನ ಸರ್ಕಾರ ಮೈ ಮರೆತು ಕೂತಿದೆ ಎಂದು ದೂರಿದರು. ಕೇಂದ್ರ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಕೆಲಸಗಳಾಗಬೇಕಿದೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಎನ್.ಎ.ಈರಣ್ಣ, ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಸೊಗಡು ವೆಂಕಟೇಶ್ ವಿ., ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ರಂಗಣ್ಣ, ಡಾ.ಜಿ.ವೆಂಕಟರಾಮಯ್ಯ, ಎನ್.ತಿಮ್ಮರೆಡ್ಡಿ, ಬಲರಾಮರೆಡ್ಡಿ, ಕೊತ್ತೂರು ನಾಗೇಶ್, ಹನುಮಂತರಾಯಪ್ಪ ಕೊತ್ತೂರು, ಅಕ್ಕಲಪ್ಪ ನಾಯ್ಡು, ಮನು ಮಹೇಶ್, ಬ್ಯಾಡ ನೂರು ಶಿವು, ಅಂಬಿಕಾ ರಮೇಶ್, ಗಂಗಾಧರ್ ನಾಯ್ಡು, ಆಂಜನೇಯ ಹಾಗೂ ಜೆಡಿಎಸ್ ಮತ್ತು ಬಿಜೆಪಿ ಮುಖಂಡರುಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು .
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA