ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಯಲ್ಲಿ ಬಳಕೆ ಮಾಡಿಕೊಳ್ಳುತ್ತಿರುವ ಸರ್ಕಾರದ ಐಎಎಸ್, ಐಪಿಎಸ್ ಅಧಿಕಾರಿಗಳನ್ನ ವಿತ್ ಡ್ರಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಬೆಂಗಳೂರಿನ ಕೆಂಗಲ್ ಗೇಟ್ ಬಳಿ ಮಾತನಾಡಿದ ಅವರು, ಇಷ್ಟು ದೊಡ್ಡ ಪ್ರಮಾಣದಲ್ಲಿ ವೆಚ್ಚ ಮಾಡ್ತಿರೋದು ಸರ್ಕಾರದ ವೆಚ್ಚ ಎಂದು ಆರೋಪಿಸಿದರು. ಬೇರೆ ರಾಜ್ಯದ ಸಿಎಂ ಬಂದಾಗ ಪ್ರೊಟೋಕಾಲ್ ಇರುತ್ತೆ, ಮಾಜಿ ಸಿಎಂಗಳಿಗೆ ಬೇರೆ, ಪಕ್ಷದ ನಾಯಕರಿಗೆ ಬೇರೆ ಇರುತ್ತದೆ.
ಆದರೆ ಸರ್ಕಾರದ ಐಎಎಸ್, ಐಪಿಎಸ್ ಅಧಿಕಾರಿಗಳು ಎಸ್ಕಾರ್ಟ್ ಮಾಡ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಅವರನ್ನೆಲ್ಲ ವಿತ್ ಡ್ರಾ ಮಾಡಬೇಕು ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


