ಇತ್ತೀಚಿನ ದಿನಗಳಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆ ನಿರ್ವಹಿಸಲು ಬಳಸಿಕೊಳ್ಳುತ್ತಿದ್ದು,
ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆ ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತೆ ಇಲ್ಲ ಎಂದು ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ಮಕ್ಕಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಶಿಕ್ಷಕರ, ಸಿಬ್ಬಂದಿಗಳ ಕರ್ತವ್ಯವಾಗಿದೆ. ಒಂದು ವೇಳೆ ಇದನ್ನು ಮೀರಿ ಶೌಚಾಲಯ ಸ್ವಚ್ಛತೆ ಮಾಡಿಸಿದರೆ ಅಂಥವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವುದಲ್ಲದೆ, ಎಫ್‌ಐಆರ್ ಅನ್ನು ಸಹ ದಾಖಲು ಮಾಡಲಾಗುತ್ತದೆ ಎಂದು ಅದರಲ್ಲಿ ತಿಳಿಸಲಾಗಿತ್ತು.