ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿದೆ. ಅನುಮತಿ ಪಡೆಯದೆ ದುಡ್ಡು ಖರ್ಚು ಮಾಡಿದ್ದಾರೆ. ಸಮರ್ಪಕ ದಾಖಲೆ ನೀಡಿಲ್ಲ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆ ಸಿಂಧೂರಿ ವಿರುದ್ಧ ತನಿಖೆಗೆ ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಿ ಸರ್ಕಾರ ಆದೀಶಿಸಿದೆ.


