ತುಮಕೂರು: ಜಿಲ್ಲೆ ಶಿರಾ ತಾಲ್ಲೂಕು ಬುಕ್ಕಾಪಟ್ಟಣ ಹೋಬಳಿಯ ಪುರ ಗ್ರಾಮದ ಗೌಡನಕಟ್ಟೆಯಲ್ಲಿ ಯುಗಾದಿ ಹಬ್ಬದಂದು ರತ್ನಮ್ಮ ಬೋವಿರವರ ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಗುಡಿಸಲಿನಲ್ಲಿದ್ದ ದಾಸ್ತಾನು ದಿನಬಳಕೆ ವಸ್ತುಗಳು ಎರಡು ಹಸು ಒಂದು ಕರು ಎರಡು ಕುರಿ ನಾಲ್ಕು ಮೇಕೆ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣ ಭಸ್ಮವಾಗಿತ್ತು.
ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಶುಕ್ರವಾರ ಸಂಜೆ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರ ಪರಿಸ್ಥಿತಿಯನ್ನು ಕಂಡು ಸಂತ್ರಸ್ತರಿಗೆ ಸಾಂತ್ವನ ಹೇಳಿ ಸ್ಥಳದಲ್ಲಿಯೇ ಧನ ಸಹಾಯ ಮಾಡಿ ಮಾನವೀಯತೆ ಮೆರೆದರು.
ಯೋಜನೆಗಳ ಮುಖಂಡರಾದ ಚಿನಾಹಳ್ಳಿ ಆರಾಧನಾ ಸಮಿತಿ ಸದಸ್ಯ ಬಿ.ಡಿ.ದ್ಯಾಮಣ್ಣ, ಅಶ್ವತ್ಥನಾರಾಯಣ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮುಕುಂದಪ್ಪ, ಚಿನಾ ಹಳ್ಳಿ ಗ್ಯಾ ಅ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಿಕ್ಕಣ್ಣ, ಹೊಸ ಪಾಳ್ಯ ಜೈ ಪ್ರಕಾಶ್, ಲಿಂಗಪ್ಪ ,ಕುರುಬರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಂಗಣ್ಣ, ಪಿ ಡಿ ಓ ಕೌಸರ್, ಸದಸ್ಯ ಮಕ್ಬೂಲ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4